Cnewstv.in / 25.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 7,189. ಒಮಿಕ್ರಾನ್ ಸೋಂಕಿತರ ಸಂಖ್ಯೆ 415 ಕ್ಕೆ ಏರಿಕೆ.
ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 7,189 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 387 ಜನ ಸಾವನ್ನಪ್ಪಿದಾರೆ.
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 122 ಕೊರೊನಾ ರೂಪಾಂತರ ಒಮಿಕ್ರಾನ್ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿ ಕೊರೊನಾ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 415 ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ. ಮಹಾರಾಷ್ಟ್ರದಲ್ಲಿ 108, ನವದೆಹಲಿ 79, ಗುಜರಾತ್ 43, ತೆಲಂಗಾಣ 38, ಕೇರಳದಲ್ಲಿ 37 ಪ್ರಕರಣಗಳು ವರದಿಯಾಗಿದೆ. ತಮಿಳುನಾಡು 34, ಕರ್ನಾಟಕ 31, ರಾಜಸ್ಥಾನ 22, ಹರಿಯಾಣ 4, ಒಡಿಸ್ಸಾ 4, ಆಂಧ್ರಪ್ರದೇಶ 4, ಜಮ್ಮು ಮತ್ತು ಕಾಶ್ಮೀರ 3, ಉತ್ತರಪ್ರದೇಶದಲ್ಲಿ 3 ಪ್ರಕರಣಗಳು ವರದಿಯಾಗಿದೆ
115 ಜನ ಒಮಿಕ್ರಾನ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. 7,286 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 77,032 ಇದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,47,79,815 ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿದರ ಸಂಖ್ಯೆ 4,77,545 ಕ್ಕೆ ಏರಿಕೆಯಾಗಿದೆ.
ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,42,23,263 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 141.01 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ಭಾರತ ಸೇರಿದಂತೆ ದೇಶಾದ್ಯಂತ ಒಮಿಕ್ರೋನ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಎಚ್ಚರವನ್ನು ವಹಿಸಬೇಕು, ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಕೋವಿಡ್ -19 ವಾರ್ ರೂಮ್ ಪುನರಾರಂಭ ಗೊಳಿಸಲು ರಾಜ್ಯಗಳಿಗೆ, ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ.
ಇದನ್ನು ಒದಿ : https://cnewstv.in/?p=7230
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments