Cnewstv.in / 25.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಎಂಇಎಸ್ ಕಾರ್ಯಕರ್ತರ ಪುಂಡಾಟಿಕೆ ಖಂಡನೀಯ :
ವಿನಯ್ ತಾಂದ್ಲೆ.
ಶಿವಮೊಗ್ಗ : ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರು ನಡೆಸುತ್ತಿರುವ ಪುಂಡಾಟಿಕೆ ಖಂಡನೀಯ ಎಂದು ಭಾವಸಾರ ಯುವಕ ಸಂಘದ ಅಧ್ಯಕ್ಷರಾದ ವಿನಯ್ ತಾಂದ್ಲೆ ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು ರಾಜ್ಯದಲ್ಲಿ ಕನ್ನಡಿಗರು ಮತ್ತು ಮರಾಠಿಗರು ಬಹಳ ಸೌಹಾರ್ದತೆಯಿಂದ ಜೀವನ ನಡೆಸುತ್ತಿದ್ದಾರೆ. ಆದರೆ ಕೆಲವು ಪುಂಡರು ನಡೆಸುತ್ತಿರುವ ಈ ವರ್ತನೆ ಜನರ ಸೌಹಾರ್ದತೆಯನ್ನು ಕಲಕುತ್ತಿದೆ. ಜನರಲ್ಲಿ ದ್ವೇಷದ ಬೀಜವನ್ನು ಬಿತ್ತುತ್ತಿದ್ದಾರೆ ಇದು ಸರಿಯಲ್ಲ.
ಸಂಗೊಳ್ಳಿ ರಾಯಣ್ಣ, ಬಸವಣ್ಣನವರ ಪುತ್ಥಳಿಗೆ ಹಾನಿ ಮಾಡಿರುವುದು, ಕನ್ನಡ ಬಾವುಟವನ್ನು ಸುಟ್ಟಿರುವುದು ಅತ್ಯಂತ ಹೀನ ಕೃತ್ಯವಾಗಿದೆ. ಇಂತಹ ಹೀನ ಕೃತ್ಯವನ್ನು ಸಡೆಸಿದವರ ವಿರುದ್ಧ ಸರಕಾರ ಕೂಡಲೇ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕು. ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ವಿನಂತಿಸಿದರು.
ಇದನ್ನು ಒದಿ : https://cnewstv.in/?p=7234
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv