Breaking News

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 6,531 ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ.

Cnewstv.in / 27.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 6,531 ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ.

ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 6,531 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 315 ಜನ ಸಾವನ್ನಪ್ಪಿದಾರೆ.

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 156 ಕೊರೊನಾ ರೂಪಾಂತರ ಒಮಿಕ್ರಾನ್ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿ ಕೊರೊನಾ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 578 ಕ್ಕೆ ಏರಿಕೆಯಾಗಿದೆ.

ದೆಹಲಿಯಲ್ಲಿ ಅತಿ ಹೆಚ್ಚು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ. ನವದೆಹಲಿ 142, ಮಹಾರಾಷ್ಟ್ರದಲ್ಲಿ 141,
ಗುಜರಾತ್ 49, ತೆಲಂಗಾಣ 41, ಕೇರಳದಲ್ಲಿ 57 ಪ್ರಕರಣಗಳು ವರದಿಯಾಗಿದೆ. ತಮಿಳುನಾಡು 34, ಕರ್ನಾಟಕ 31, ರಾಜಸ್ಥಾನ 43, ಮಧ್ಯಪ್ರದೇಶ 9, ಹರಿಯಾಣ 4, ಒಡಿಸ್ಸಾ 4, ಆಂಧ್ರಪ್ರದೇಶ 6, ಜಮ್ಮು ಮತ್ತು ಕಾಶ್ಮೀರ 3, ಉತ್ತರಪ್ರದೇಶದಲ್ಲಿ 3 ಪ್ರಕರಣಗಳು ವರದಿಯಾಗಿದೆ

151 ಜನ ಒಮಿಕ್ರಾನ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. 7,141 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 75,841 ಇದೆ.

ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,42,37,495 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 141.01 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ಭಾರತ ಸೇರಿದಂತೆ ದೇಶಾದ್ಯಂತ ಒಮಿಕ್ರೋನ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಎಚ್ಚರವನ್ನು ವಹಿಸಬೇಕು, ಕೋವಿಡ್ ನಿಯಮಗಳನ್ನು ಪಾಲಿಸಬೇಕು

ಇದನ್ನು ಒದಿ : https://cnewstv.in/?p=7243

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*