Breaking News

ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ರಾಜ್ಯಕ್ಕೆ ಹೆಚ್ಚುವರಿಯಾಗಿ 715ಕೋಟಿ ರೂ. ಅನುದಾನ ಲಭ್ಯವಾಗಲಿದೆ.

Cnewstv.in / 27.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ರಾಜ್ಯಕ್ಕೆ ಹೆಚ್ಚುವರಿಯಾಗಿ 715ಕೋಟಿ ರೂ. ಅನುದಾನ ಲಭ್ಯವಾಗಲಿದೆ.

ಶಿವಮೊಗ್ಗ : ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ ಈ ಸಾಲಿಗೆ 1.40ಕೋಟಿ ಮಾನವ ದಿನಗಳನ್ನು ಒದಗಿಸಿದೆ. ಇದರಿಂದ ರಾಜ್ಯಕ್ಕೆ ಹೆಚ್ಚುವರಿಯಾಗಿ 715ಕೋಟಿ ರೂ. ಅನುದಾನ ಲಭ್ಯವಾಗಲಿದೆ ಎಂದು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ 2021-22ನೇ ಸಾಲಿಗೆ ರಾಜ್ಯಕ್ಕೆ ನೀಡಲಾಗಿದ್ದ 13 ಕೋಟಿ ಮಾನವ ದಿನಗಳ ಗುರಿಯನ್ನು ಡಿಸೆಂಬರ್ ಒಳಗೆ ಪೂರ್ಣಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಬೇಡಿಕೆಯನ್ನು ಮನ್ನಿಸಿ ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ ಈ ಸಾಲಿಗೆ 1.40ಕೋಟಿ ಮಾನವ ದಿನಗಳನ್ನು ಒದಗಿಸಿದೆ. ಇದರಿಂದ ರಾಜ್ಯಕ್ಕೆ ಹೆಚ್ಚುವರಿಯಾಗಿ 715ಕೋಟಿ ರೂ. ಅನುದಾನ ಲಭ್ಯವಾಗಲಿದೆ.

ಕೇಂದ್ರ ಸರ್ಕಾರ ಯೋಜನೆಯಡಿ 661.24ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಇಲ್ಲಿಯವರೆಗೆ ಸಂಪೂರ್ಣವಾಗಿ ಯೋಜನೆಯಡಿ ಕೂಲಿ ಹಣವನ್ನು ಪಾವತಿಸಿದಂತಾಗಿದೆ ಎಂದು ಸಚಿವರು ತಿಳಿಸಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಕೊಳಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ವೆಂಕಟೇಶ್, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಉಪವಿಭಾಗಧಿಕಾರಿ ಪ್ರಕಾಶ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನು ಒದಿ : https://cnewstv.in/?p=7253

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*