Breaking News

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 6,358. ಒಮಿಕ್ರಾನ್ ಸೋಂಕಿತರ ಸಂಖ್ಯೆ 653 ಕ್ಕೆ ಏರಿಕೆ.

Cnewstv.in / 28.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 6,358. ಒಮಿಕ್ರಾನ್ ಸೋಂಕಿತರ ಸಂಖ್ಯೆ 653 ಕ್ಕೆ ಏರಿಕೆ.

ನವದೆಹಲಿ : ಭಾರತದಲ್ಲೂ ದಿನೇ ದಿನೇ ಒಮಿಕ್ರೋನ್‌ ಸೋಂಕಿತರ (Omicron Cases)ಸಂಖ್ಯೆಯಲ್ಲಿ ಭಾರೀ ಏರಿಕೆ ಕಾಣಿಸುತ್ತಿದೆ.ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 6,358 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 315 ಜನ ಸಾವನ್ನಪ್ಪಿದಾರೆ.

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 156 ಕೊರೊನಾ ರೂಪಾಂತರ ಒಮಿಕ್ರಾನ್ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿ ಕೊರೊನಾ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 653 ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ. ಮಹಾರಾಷ್ಟ್ರದಲ್ಲಿ 167, ನವದೆಹಲಿ 165, ಗುಜರಾತ್ 49, ತೆಲಂಗಾಣ 55, ಕೇರಳದಲ್ಲಿ 57 ಪ್ರಕರಣಗಳು ವರದಿಯಾಗಿದೆ. ತಮಿಳುನಾಡು 34, ಕರ್ನಾಟಕ 31, ರಾಜಸ್ಥಾನ 46, ಮಧ್ಯಪ್ರದೇಶ 9, ಹರಿಯಾಣ 4, ಒಡಿಸ್ಸಾ 8, ಆಂಧ್ರಪ್ರದೇಶ 6, ಜಮ್ಮು ಮತ್ತು ಕಾಶ್ಮೀರ 3, ಉತ್ತರಪ್ರದೇಶದಲ್ಲಿ 2 ಪ್ರಕರಣಗಳು ವರದಿಯಾಗಿದೆ

186 ಜನ ಒಮಿಕ್ರಾನ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. 6,450 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 75,456 ಇದೆ.

ಭಾರತ ಸೇರಿದಂತೆ ದೇಶಾದ್ಯಂತ ಒಮಿಕ್ರೋನ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಎಚ್ಚರವನ್ನು ವಹಿಸಬೇಕು, ಕೋವಿಡ್ ನಿಯಮಗಳನ್ನು ಪಾಲಿಸಬೇಕು.

ಇದನ್ನು ಒದಿ : https://cnewstv.in/?p=7256

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*