Breaking News

Night Curfew : ರಾಜ್ಯಾದ್ಯಂತ ಇಂದಿನಿಂದ 10 ದಿನಗಳವರೆಗೆ ನೈಟ್ ಕರ್ಫ್ಯೂ ಜಾರಿ.

Cnewstv.in / 28.12.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ರಾಜ್ಯಾದ್ಯಂತ ಇಂದಿನಿಂದ 10 ದಿನಗಳವರೆಗೆ ನೈಟ್ ಕರ್ಫ್ಯೂ ಜಾರಿ.

ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ಜನವರಿ 2 ರವರೆಗೆ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ ಇರಲಿದೆ.

ದೇಶಾದ್ಯಂತ ಕೊರೊನಾ ರೂಪಾಂತರಿ ವೈರಸ್ ಒಮಿಕ್ರಾನ್ ಭೀತಿ ಹೆಚ್ಚಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಿ, ಬಳಿಕ ನೈಟ್ ಕರ್ಫ್ಯೂ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ.

ಹೊಸ ಮಾರ್ಗಸೂಚಿ ಅನ್ವಯ, ರಾಜ್ಯಾದ್ಯಂತ ಇಂದಿನಿಂದ ಜನವರಿ 7 ರ ವರೆಗೆ 10 ದಿನಗಳ ಕಾಲ‌ ನೈಟ್‌ ಕರ್ಫ್ಯೂ ಜಾರಿಯಲ್ಲಿರುತ್ತದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ.

ಕರ್ಫ್ಯೂ ಅವಧಿಯಲ್ಲಿ ತುರ್ತುಚಿಕಿತ್ಸೆಗೆ ಅಗತ್ಯವಿರುವಂತಹ ವೈದ್ಯರು, ದಾದಿಯರು ಹಾಗೂ ಸಿಬ್ಬಂದಿಗಳು ಓಡಾಡಬಹುದು.‌ ಸಾರ್ವಜನಿಕ ಸಾರಿಗೆ, ರೈಲು, ಮೆಟ್ರೋ ಸೇವೆ ಏರ್ಪೋರ್ಟ್, ರೈಲ್ವೆ ನಿಲ್ದಾಣಕ್ಕೆ ಸಂಚರಿಸುವ ವಾಹನಗಳಿಗೆ ಅನುಮತಿ ನೀಡಲಾಗಿದೆ. ರಾತ್ರಿ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸುವ ಕೈಗಾರಿಕಾ ಘಟಕದ ಉದ್ಯೋಗಿಗಳು, ಟೆಲಿಕಾಂ ಮತ್ತು ಇಂಟರ್ನೆಟ್ ಸೇವಾ ಕಂಪನಿ ಸಿಬ್ಬಂದಿಗಳಿಗೆ ಅವಕಾಶ ನೀಡಲಾಗಿದೆ.

ಈ ಅವಧಿಯಲ್ಲಿ ಅನಗತ್ಯ ಸುತ್ತಾಟ, ಜನ ಸೇರುವಿಕೆ, ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮಗಳು, ಬಾರ್, ಪಬ್, ರೆಸ್ಟೋರೆಂಟ್, ಚಲನಚಿತ್ರ ಮಂದಿರ ಸೇರಿದಂತೆ ಅಗತ್ಯ ಸೇವೆಯಲ್ಲದ ಯಾವುದೇ ವಾಣಿಜ್ಯ ಚಟುವಟಿಕೆಗೂ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಸಭೆ, ಸಮಾರಂಭ, ಸಮಾವೇಶ, ಮದುವೆ ಕಾರ್ಯಕ್ರಮಗಳಲ್ಲಿ 300ಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಎಂಬ ನಿಯಮ ಕೂಡ ಅನ್ವಯವಾಗಲಿದೆ.

ನೈಟ್ ಕರ್ಫ್ಯೂ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ NDMA, KPDA ಕಾಯ್ದೆಯಡಿ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಅಲ್ಲದೆ ಸುಖಾಸುಮ್ಮನೆ ಓಡಾಡುವವರನ್ನು ವಶಕ್ಕೆ ಪಡೆಯಲು ಸೂಚನೆ ನೀಡಲಾಗಿದೆ.

ಇದನ್ನು ಒದಿ : https://cnewstv.in/?p=7259

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*