Cnewstv.in / 30.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ.
ಶಿವಮೊಗ್ಗ : 2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜನವರಿ 03, 2022ರವರೆಗೆ ವಿಸ್ತರಿಸಲಾಗಿದೆ.
ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಪ್ರವರ್ಗ-1, ಎಸ್‍ಸಿ ಮತ್ತು ಎಸ್‍ಟಿ ಆದಾಯ ಮಿತಿ ರೂ.2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ಆದಾಯ ಮಿತಿ ರೂ.1.00 ಲಕ್ಷ ಇರುತ್ತದೆ. ಅರ್ಜಿ ಸಲ್ಲಿಸಲು ಹಾಗೂ ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ www.bcwd.karnataka.gov.in ನ್ನು ವೀಕ್ಷಿಸಬೇಕು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.inಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಹಾಗೂ ಸಹಾಯವಾಣಿ ಸಂಖ್ಯೆ 080-5050370006 ನ್ನು ಸಹ ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.
ಇದನ್ನು ಒದಿ : https://cnewstv.in/?p=7267
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv