Cnewstv.in / 30.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಮಂಡಗದ್ದೆ : ಬಸ್ ಮತ್ತು ಲಾರಿ ಡಿಕ್ಕಿ.
ಶಿವಮೊಗ್ಗ : ಮಂಡಗದ್ದೆ 15ನೇ ಮೈಲಿಕಲ್ ಸಮೀಪ ಸೈಯಾದ್ರಿ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ.
ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಬರುತ್ತಿದ್ದ ಸಹ್ಯಾದ್ರಿ ಬಸ್ ಮತ್ತು ತೀರ್ಥಹಳ್ಳಿ ಮೇಳಿಗೆ ಸಮೀಪದ ಹಳ್ಳಿಗೆ ಅಡಿಕೆಯನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಿಂದಾಗಿ ಲಾರಿಯ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಬಸ್ಸಿನ ಮುಂಭಾಗದ ಕ್ಲಾಸ್ ಪುಡಿ ಪುಡಿಯಾಗಿದೆ.
ಅಪಘಾತದಲ್ಲಿ ಹತ್ತರಿಂದ ಹದಿನೈದು ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದೆ. ಗಾಯಾಳುಗಳನ್ನು ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಾರಿ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನು ಒದಿ : https://cnewstv.in/?p=7269
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv