Breaking News

ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ, ರಸ್ತೆ ದಾಟುತ್ತಿದ್ದ ಪಾದಚಾರಿಗೆ ಗಂಭೀರ ಗಾಯ.

Cnewstv.in / 30.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ, ರಸ್ತೆ ದಾಟುತ್ತಿದ್ದ ಪಾದಚಾರಿಗೆ ಗಂಭೀರ ಗಾಯ.

ಶಿವಮೊಗ್ಗ : ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ವಾದಿ-ಎ-ಹುದಾ ಬಳಿ ರಸ್ತೆ ದಾಟುತಿದ್ದ ಅಬ್ದುಲ್ ರಶೀದ್ (70)ಎಂಬ ವ್ಯಕ್ತಿಯ ಮೇಲೆ ಬೆಂಗಳೂರಿನಿಂದ ಶಿವಮೊಗ್ಗ ಬಸ್ ನಿಲ್ದಾಣಕ್ಕೆ ಹೋಗುತ್ತಿದೆ ಕೆ.ಎಸ್.ಅರ್,ಟಿ.ಸಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ರಶೀದ್ ತೀವ್ರವಾಗಿ ಗಾಯಗೊಂಡಿದ್ದಾನೆ.‌ ತಕ್ಷಣ ಅವನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಈ ರಸ್ತೆಯಲ್ಲಿ ಬಸ್ ಅತ್ಯಂತ ವೇಗವಾಗಿ ಬಂದ ಪರಿಣಾಮ ಈ ಅಪಘಾತ ಸಂಭವಿಸಿದೆ. ಗಾಯಗೊಂಡ ವ್ಯಕ್ತಿಯ ಕುಟುಂಬಸ್ಥರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸ್ಥಳೀಯರು ಕೆಲಕಾಲ ಬಸ್ ತಡೆದು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದರು. ಘಟನೆಗೆ ಸಂಬಂಧಿಸಿದಂತೆ ಪಶ್ಚಿಮ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಒದಿ : https://cnewstv.in/?p=7280

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*