Breaking News

ಸಹ್ಯಾದ್ರಿ ಸ್ನೇಹ ಸಂಘದ ವತಿಯಿಂದ ವಿಜಯ್‌ಕುಮಾರ್‌ಗೆ ಸನ್ಮಾನ

Cnewstv.in / 31.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಿವಮೊಗ್ಗ: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಚುನಾವಣೆಯಲ್ಲಿ ವಿಜೇತರಾಗಿರುವ ಜಿ.ವಿಜಯ್‌ಕುಮಾರ್ ಅವರಿಗೆ ಸಹ್ಯಾದ್ರಿ ಸ್ನೇಹ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿರುವ ಹಾಗೂ ಅಖಿಲ ಕರ್ನಾಟಕ ಫೈನಾನ್ಸಿಯರ್ ಅಸೋಸಿಯೇಷನ್ ಕಾರ್ಯಕಾರಿ ಸಮಿತಿ ಮಂಡಳಿಗೆ ನಾಮಕರಣ ಸದಸ್ಯರಾಗಿ ಆಯ್ಕೆಯಾಗಿರುವ ಜಿ.ವಿಜಯಕುಮಾರ್ ಅವರಿಗೆ ಸಹ್ಯಾದ್ರಿ ಸ್ನೇಹ ಸಂಘದ ಪದಾಧಿಕಾರಿಗಳು ಅಭಿನಂದಿಸಿದರು.
ರೋಟರಿ ವಲಯ 11ರ ಸಹಾಯಕ ಗವರ್ನರ್ ಆಗಿ ಕಾರ್ಯನಿರ್ವಹಿಸಿದ್ದರು. ಯೂತ್ ಹಾಸ್ಟೆಲ್ ಅಸೋಸಿಯೇಷನ್ ರಾಜ್ಯ ಉಪಾಧ್ಯಕ್ಷರಾಗಿಯೂ ಕೆಲಸ ಮಾಡಿರುವ ವಿಜಯ್‌ಕುಮಾರ್ ಅವರು ಅತ್ಯಂತ ಸರಳಜೀವಿ ಹಾಗೂ ಸಮಾಜಸೇವಕರಾಗಿ ಗುರುತಿಸಿಕೊಂಡಿದ್ದಾರೆ.

ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್ ಮಾತನಾಡಿ, ವಿಜಯ್ ಕುಮಾರ್ ಅವರು ಶಿವಮೊಗ್ಗ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜ್ಯಮಟ್ಟದ ವಿವಿಧ ಸಂಘಟನೆಗಳಲ್ಲಿಯೂ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುತ್ತ ಸಮಾಜಮುಖಿಯಾಗಿ ಕೆಲಸ ಮಾಡುತ್ತಿದ್ದಾರೆ. ನಿರಂತರವಾಗಿ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ರೋಟರಿ ಸಂಸ್ಥೆ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಸೇರಿ ಇತರೆಡೆಯು ಕೆಲಸ ಮಾಡುತ್ತಿದ್ದಾರೆ. ಇವರ ಸೇವಾ ಕಾರ್ಯ ಅಭಿನಂದನೀಯ ಎಂದು ತಿಳಿಸಿದರು.

ಡಾ. ಪರಿಸರ ನಾಗರಾಜ್, ಸುರೇಶ್, ಮಲ್ಲಿಕಾರ್ಜುನ ಕಾನೂರ್, ಗಣೇಶ್ ಎಂ.ಅಂಗಡಿ, ಬಸವೇಶ್ವರ ಸೊಸೈಟಿ ಮಾಜಿ ಅಧ್ಯಕ್ಷ ಮರುಳೇಶ್ ಹಾಜರಿದ್ದರು.

ಇದನ್ನು ಒದಿ : https://cnewstv.in/?p=7282

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*