Cnewstv.in / 31.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಪಿಹೆಚ್.ಡಿ ವ್ಯಾಸಂಗ ವೇತನ ಅರ್ಜಿ ಅವಧಿ ವಿಸ್ತರಣೆ.
ಶಿವಮೊಗ್ಗ : 2021-22 ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಹೆಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ವ್ಯಾಸಂಗ ವೇತನ/ಫೆಲೋಶಿಪ್‍ಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು 2022 ರ ಜನವರಿ 16 ರವರೆಗೆ ವಿಸ್ತರಿಸಲಾಗಿದೆ.
ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಹಾಗೂ 3ಬಿ ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ರೂ.10,000 ರಂತೆ ವ್ಯಾಸಂಗ ವೇತನ/ಫೆಲೋಶಿಪ್ ಮಂಜೂರು ಮಡಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಅವಧಿಯನ್ನು 2022 ರ ಜ.16 ರ ಸಂಜೆ 5.30 ರವರೆಗೆ ವಿಸ್ತರಿಸಲಾಗಿದೆ. 2021-22 ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ದ ವಿಶ್ವವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿ.ಹೆಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಗಳು ಆನ್‍ಲೈನ್ ಅರ್ಜಿ ಪ್ರತಿ ಹಾಗೂ ಒಂದು ಸೆಟ್ ದೃಢೀಕೃತ ದಾಖಲೆಗಳನ್ನು ಸಂಬಂಧಪಟ್ಟ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಲು 2022 ರ ಜ.17 ರ ಸಂಜೆ 5.30 ರವರೆಗೆ ಅವಧಿ ಇರುತ್ತದೆ. ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್‍ಸೈಟ್ https://www.bcwd.karnataka.gov.in ಅನ್ನು ನೋಡಬಹುದು. ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ, ಶಿವಮೊಗ್ಗ ದೂ.ಸಂ: 08182-222129, ಸಹಾಯವಾಣಿ ಸಂಖ್ಯೆ 8050770004 ನ್ನು ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=7282
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments