Breaking News

ಒಮಿಕ್ರಾನ್ : ಕೇಂದ್ರ ಸರ್ಕಾರದ ಡೇಂಜರ್ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ.

Cnewstv.in / 31.12.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಒಮಿಕ್ರಾನ್ : ಕೇಂದ್ರ ಸರ್ಕಾರದ ಡೇಂಜರ್ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ.

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ರೂಪಾಂತರಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಕೊರೊನಾ ಮೂರನೇ ಅಲೆ ಆರಂಭವಾಗುತ್ತದೆ ಎಂಬ ಅನುಮಾನವನ್ನು ಸೃಷ್ಟಿಸುತ್ತಿದೆ.‌ ಅಲ್ಲದೇ ಕೊರೋನಾ ಡೇಂಜರ್ ಜಿಲ್ಲೆಗಳಲ್ಲಿ ಕರ್ನಾಟಕ ಕೂಡ ಒಂದಾಗಿದೆ.

ಹೌದು ಕೇಂದ್ರ ಸರ್ಕಾರದ ಡೇಂಜರ್ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಸೇರಿದೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಮತ್ತು ಸರ್ಕಾರದ ಆಡಳಿತಕ್ಕೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗಳ ಸಭೆಯನ್ನು ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇಡೀ ದೇಶದಲ್ಲಿ ಓಮಿಕ್ರಾನ್ ಸೋಂಕು ಜಾಸ್ತಿಯಾಗುತ್ತಿದೆ. ಅಪಾಯಕಾರಿ ಎಂಟು ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಕೂಡ ಒಂದು ಎಂದು ಕೇಂದ್ರ ಸರ್ಕಾರ ಗುರುತಿಸಿದೆ. ಹೀಗಾಗಿ ನಾವು ಕೆಲವು ಕಟ್ಟೆಚ್ಚರ ವಹಿಸಿದ್ದೇವೆ. ಮುಂದಿನ ದಿನಗಳಲ್ಲಿ ಸೋಂಕು ಯಾವ ಕಡೆಗೆ ಸಾಗುತ್ತದೆ, ನಮ್ಮ ರಾಜ್ಯದ ಆರೋಗ್ಯ ಮೂಲಸೌಕರ್ಯಗಳು ಹೇಗಿವೆ ಎಂದು ನೋಡಿಕೊಂಡು ಕ್ರಮ ತೆಗೆದುಕೊಳ್ಳುವ ಅವಶ್ಯಕತೆಯಿದೆ ಎಂದರು.

ಕರ್ನಾಟಕದಲ್ಲಿ ಮುಂಜಾಗ್ರತಾ ಕ್ರಮ ತೆಗದುಕೊಳ್ಳಲಾಗಿದೆ, ಆಕ್ಸಿಜನ್ , ಬೆಡ್ , ಆರೋಗ್ಯ ಸೌಕರ್ಯಗಳ ಹೆಚ್ಚಳ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಇದನ್ನು ಒದಿ : https://cnewstv.in/?p=7293

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*