Cnewstv.in / 02.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಪುಸ್ತಕ ಆಹ್ವಾನ.
ಶಿವಮೊಗ್ಗ : ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಗ್ರಂಥಾಲಯಗಳಿಗೆ ಏಕಗವಾಕ್ಷಿ ಯೋಜನೆಯಡಿ 2021 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಣೆಯಾದ ಪುಸ್ತಕಗಳನ್ನು ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಆಹ್ವಾನಿಸಲಾಗಿದೆ.
2021 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಯ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ ಜ.31 ರೊಳಗೆ ಕಾಪಿಟೈಟ್ ಮಾಡಿಸಿರತಕ್ಕದ್ದು. ಕಾಪಿರೈಟ್ ಮಾಡಿಸಿರುವ ಪುಸ್ತಕಗಳನ್ನು ಆಯ್ಕೆಗಾಗಿ ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು ಹಾಗೂ ಡಿಜಿಟಲ್ ಗ್ರಂಥಾಲಯ ಸೇವೆಯನ್ನು ಸಾರ್ವಜನಿಕ ಓದುಗರಿಗೆ ಒದಗಿಸಲು ಅನುಕೂಲವಾಗುವಂತೆ ಆಸಕ್ತಿಯುಳ್ಳ ಲೇಖಕರು, ಲೇಖಕ-ಪ್ರಕಾಶಕರು ಮತ್ತು ಪ್ರಕಟಣಾ ಸಂಸ್ಥೆಗಳು ಪುಸ್ತಕವನ್ನು ಆಯ್ಕೆಗೆ ಸಲ್ಲಿಸುವಾಗ ತಮ್ಮ ಅನುಮತಿ ಪತ್ರದೊಂದಿಗೆ ಸದರಿ ಪುಸ್ತಕದ ಸಾಫ್ಟ್ ಕಾಪಿಯನ್ನು ಸಿಡಿ ರೂಪದಲ್ಲಿ(ನೋಂದಣಿ ಪತ್ರದ ಪ್ರತಿಯೊಂದಿಗೆ) ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇಲ್ಲಿಗೆ ಜನವರಿ 01 ರಿಂದ ಫೆಬ್ರವರಿ 05 ರೊಳಗೆ ಸಲ್ಲಿಸುವುದು.
ನಿಗದಿತ ಅರ್ಜಿ ನಮೂನೆ ಮತ್ತು ನಿಬಂಧನೆಗಳ ಮಾಹಿತಿಗಾಗಿ ಇಲಾಖಾ ಅಂತರ್ಜಾಲ ಹಾಗೂ ರಾಜ್ಯದ ಎಲ್ಲಾ ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯಗಳ ಉಪನಿರ್ದೇಶಕರು/ಮುಖ್ಯ ಗ್ರಂಥಾಲಯಾಧಿಕಾರಿಗಳ ಕಚೇರಿಗಳಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22864990, 22867358 ನ್ನು ಸಂಪರ್ಕಿಸಬಹುದೆಂದು ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ(ಪ್ರ) ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=7311
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv