Cnewstv.in / 03.01.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 33,750. ಒಮಿಕ್ರಾನ್ ಸೋಂಕಿತರ ಸಂಖ್ಯೆ 1700 ಕ್ಕೆ ಏರಿಕೆ.
ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 33,750 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 123 ಜನ ಸಾವನ್ನಪ್ಪಿದಾರೆ.
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 175 ಕೊರೊನಾ ರೂಪಾಂತರ ಒಮಿಕ್ರಾನ್ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿ ಕೊರೊನಾ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 1700 ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ. ಮಹಾರಾಷ್ಟ್ರದಲ್ಲಿ 510, ನವದೆಹಲಿ 351, ಗುಜರಾತ್ 136, ತೆಲಂಗಾಣ 67, ಕೇರಳದಲ್ಲಿ 156 ಪ್ರಕರಣಗಳು ವರದಿಯಾಗಿದೆ. ತಮಿಳುನಾಡು 121, ಕರ್ನಾಟಕ 64, ರಾಜಸ್ಥಾನ 120, ಮಧ್ಯಪ್ರದೇಶ 9, ಹರಿಯಾಣ 63, ಒಡಿಸ್ಸಾ 37, ಆಂಧ್ರಪ್ರದೇಶ 17, ಜಮ್ಮು ಮತ್ತು ಕಾಶ್ಮೀರ 3, ಉತ್ತರಪ್ರದೇಶದಲ್ಲಿ 2 ಪ್ರಕರಣಗಳು ವರದಿಯಾಗಿದೆ
639 ಜನ ಒಮಿಕ್ರಾನ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. 10,846 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,45,582 ಇದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,47,79,815 ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿದರ ಸಂಖ್ಯೆ 4,77,545 ಕ್ಕೆ ಏರಿಕೆಯಾಗಿದೆ.
ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,42,95,407 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 144.83 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ಭಾರತ ಸೇರಿದಂತೆ ದೇಶಾದ್ಯಂತ ಒಮಿಕ್ರೋನ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಎಚ್ಚರವನ್ನು ವಹಿಸಬೇಕು, ಕೋವಿಡ್ ನಿಯಮಗಳನ್ನು ಪಾಲಿಸಬೇಕು.
ಇದನ್ನು ಒದಿ : https://cnewstv.in/?p=7319
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv