Cnewstv.in / 03.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇಂದಿನಿಂದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ. ಜಿಲ್ಲೆಯಲ್ಲಿ ಎಷ್ಟು ಜನ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಿದೆ ??
ಶಿವಮೊಗ್ಗ : ರಾಜ್ಯದಲ್ಲಿ ಇಂದಿನಿಂದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಜಿಲ್ಲೆಯ ಸೈನ್ಸ್ ಮೈದಾನದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಚಾಲನೆ ನೀಡಿದರು.
ಜಿಲ್ಲೆಯಲ್ಲಿ ಮೊದಲ ದಿನವೇ 8 ಸಾವಿರ ಮಕ್ಕಳಿಗೆ ಲಸಿಕೆ ನೀಡಲು ಆರೋಗ್ಯ ಇಲಾಖೆ ತಯಾರಾಗಿದೆ. ಜಿಲ್ಲೆಯಲ್ಲಿ ಒಟ್ಟು 74 ಲಸಿಕಾ ಕೇಂದ್ರಗಳಲ್ಲಿ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ.
ಇನ್ನು ಮುಂದಿನ 10 ದಿನಗಳಲ್ಲಿ ಜಿಲ್ಲೆಯಲ್ಲಿ 83,831 ಮಕ್ಕಳಿಗೆ ಲಸಿಕೆ ನೀಡುವ ಗುರಿಯನ್ನು ಹೊಂದಿದ್ದು, ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಜಿಲ್ಲೆಯಲ್ಲಿ 35 ಸಾವಿರ ಕೋವ್ಯಾಕ್ಸಿನ್ ಲಭ್ಯವಿದೆ.
ಪ್ರಾರ್ಥಮಿಕ ಆರೋಗ್ಯ ಕೇಂದ್ರ ವಾರು ಕ್ರಿಯಾಯೋಜನೆಯನ್ನು ತಯಾರಿಸಿದ್ದು, ಈ ಯೋಜನೆಯಂತೆ ಜಿಲ್ಲೆಯ ಎಲ್ಲಾ ಪ್ರೌಢ ಶಾಲೆ ಮತ್ತು ಕಾಲೇಜುಗಳಲ್ಲಿ ಲಸಿಕೆ ನೀಡಲಾಗುವುದು.
ಮಕ್ಕಳಿಗೆ ಲಸಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದೆ. ಲಸಿಕೆ ನೀಡಿದ ನಂತರ ಮಕ್ಕಳಲ್ಲಿ ಏನಾದರೂ ತೊಂದರೆ ಕಂಡು ಬಂದರೆ ಸೂಕ್ತ ಚಿಕಿತ್ಸೆ ನೀಡಲು 5 ಪ್ರಾರ್ಥಮಿಕ ಆರೋಗ್ಯ ಕೇಂದ್ರಗಳು ಒಳಗೊಂಡಂತೆ 1 ಆಂಬುಲೆನ್ಸ್ ನಿಯೋಜಿಸಲಾಗಿದೆ.
ಇದನ್ನು ಒದಿ : https://cnewstv.in/?p=7323
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv