Cnewstv.in / 04.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ನಿರಂತರ ಜ್ಯೋತಿ ಯೋಜನೆಯಲ್ಲಿ ನಡೆದ ಅವ್ಯವಹಾರದ ತನಿಖೆಯನ್ನು ಸಿಬಿಐಗೆ ನೀಡಿ : ಕೆಬಿಪಿ.
ಶಿವಮೊಗ್ಗ : ನಿರಂತರ ಜ್ಯೋತಿ ಯೋಜನೆಯಲ್ಲಿ ನಡೆದ ಅವ್ಯವಹಾರವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಶಾಸಕ ಕೆಬಿ ಪ್ರಸನ್ನ ಕುಮಾರ್ ಆಗ್ರಹಿಸಿದರು.
ನಿರಂತರ ಜ್ಯೋತಿ ಯೋಜನೆ ಜಿಲ್ಲೆಯಲ್ಲಿ ಸುಮಾರು 40ರಿಂದ 50 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಸಚಿವರೇ ಹೇಳಿದ್ದಾರೆ. ಜಿಲ್ಲೆಗೆ 210 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಈಗಾಗಲೇ ಇದರಲ್ಲಿ 140 ಕೋಟಿ ರೂಪಾಯಿ ಗುತ್ತಿಗೆದಾರರಿಗೆ ಪಾವತಿ ಮಾಡಲಾಗಿದೆ.
ಇಂಧನ ಸಚಿವರು ಬಂದಾಗ 5 ಕೋಟಿ ರೂ ಹೆಚ್ಚುವರಿಯಾಗಿ ನೀಡಲಾಗಿದೆ. ಅವ್ಯವಹಾರವಾಗಿದ್ದನ್ನು ಅಧಿಕಾರಿಗಳ ಸಭೆಯಲ್ಲಿ ಸಚಿವರ ಗಮನಕ್ಕೆ ತಂದಿದ್ದು ಸರಿಮಾಡಿಕೊಳ್ಳಿ ಎಂದಿದ್ದಾರೆ. ಈ ಸರಿಮಾಡಿಕೊಳ್ಳಿ ಎಂಬುದರ ಅರ್ಥವೇನು ಎಂದು ಪ್ರಶ್ನಿಸಿದರು ??
ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರು ನಿರಂತರ ಜ್ಯೋತಿ ಯೋಜನೆಯಲ್ಲಿ ನಡೆದ ಅವ್ಯವಹಾರದ ತನಿಖೆಯನ್ನು ಸಿಬಿಐಗೆ ನೀಡಬೇಕು ಎಂದು ಒತ್ತಾಯಿಸಿದರು.
ಇದನ್ನು ಒದಿ : https://cnewstv.in/?p=7350
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv