Breaking News

300 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ಜಾಗ ವಶಪಡಿಸಿಕೊಂಡ ಬಿಡಿಎ ಅಧಿಕಾರಿಗಳು..

Cnewstv.in / 05.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

300 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ಜಾಗ ವಶಪಡಿಸಿಕೊಂಡ ಬಿಡಿಎ ಅಧಿಕಾರಿಗಳು..

ಬೆಂಗಳೂರು: ಬಿಡಿಎ ಅಧಿಕಾರಿಗಳು ರಾಜಾಜಿನಗರ ಮತ್ತು ವಿಜಯನಗರ ವ್ಯಾಪ್ತಿಯಲ್ಲಿ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸಿದ್ದು ಸುಮಾರು 300 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದಿದ್ದಾರೆ.

ಕಳೆದ ಮೂರು ದಿನಗಳಲ್ಲಿ ಬಿಡಿಎ ಅಧ್ಯಕ್ಷ ಎಸ್‌.ಆರ್‌.ವಿಶ್ವನಾಥ್‌ ಮತ್ತು ಆಯುಕ್ತ ರಾಜೇಶ್‌ ಗೌಡ ಮಾರ್ಗದರ್ಶನದಲ್ಲಿ ಬಿಡಿಎ ಪೊಲೀಸ್‌ ವರಿಷ್ಠಾಧಿಕಾರಿ ಭಾಸ್ಕರ್‌ ಮತ್ತು ರವಿಕುಮಾರ್‌ ನೇತೃತ್ವದಲ್ಲಿ ಐದಕ್ಕೂ ಹೆಚ್ಚು ಜೆಸಿಬಿಗಳು ಮತ್ತು ಐವತ್ತಕ್ಕೂ ಹೆಚ್ಚು ಸಿಬ್ಬಂದಿಯಿಂದ ಪೆಟ್ರೋಲ್‌ ಬಂಕ್‌, ಗ್ಯಾರೇಜ್‌ಗಳನ್ನು ತೆರವುಗೊಳಿಸಲಾಗಿದೆ

ರಾಜಾಜಿನಗರ 6ನೇ ಹಂತದಲ್ಲಿ ಪ್ರಸನ್ನ ಚಿತ್ರಮಂದಿರದ ಬಳಿ 2 ಎಕರೆ 20 ಗುಂಟೆ ಬಿಡಿಎ ಜಾಗದಲ್ಲಿ ಅತಿಕ್ರಮವಾಗಿ 5 ತಾತ್ಕಾಲಿಕ ಶೆಡ್‌ಗಳು ಮತ್ತು 1 ಗ್ಯಾರೇಜ್‌ ಅನ್ನು ನಿರ್ಮಾಣ ಮಾಡಲಾಗಿತ್ತು. ಹಲವು ಬಾರಿ ನೊಟೀಸ್‌ ನೀಡಿದ್ದರೂ ಅತಿಕ್ರಮ ತೆರವು ಮಾಡಿರಲಿಲ್ಲ.ಈ ಜಾಗದ ಅಂದಾಜು ಮೌಲ್ಯ 175 ಕೋಟಿ ರೂ. ಆಗಿದೆ ಎಂದು ತಿಳಿಸಿದ್ದಾರೆ. ವಿಜಯನಗರ
ಅತ್ತಿಗುಪ್ಪೆಯ ಕೆಂಪಾಪುರ ಅಗ್ರಹಾರದಲ್ಲಿ ಬಿಡಿಎಗೆ ಸೇರಿದ ಸರ್ವೇ ನಂಬರ್‌ 329/3 ರಲ್ಲಿ ಅತಿಕ್ರಮವಾಗಿ ನಿರ್ಮಾಣವಾಗಿದ್ದ ಪೆಟ್ರೋಲ್‌ ಬಂಕ್‌ ಮತ್ತು ಖಾಲಿ ಜಾಗ ಸೇರಿ ಒಟ್ಟು 1 ಎಕರೆ 9 ಗುಂಟೆ ಜಾಗವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಈ ಹಿಂದೆ ಭೂ ಮಾಲೀಕರು ಈ ಸಂಬಂಧ ಹೈಕೋರ್ಟ್‌ನಲ್ಲಿ ದಾವೆ ಸಲ್ಲಿಸಿದರು. ನ್ಯಾಯಾಲಯದಲ್ಲಿ ಅವರ ಪರವಾಗಿ ನೀಡಲಾಗಿದ್ದ ತೀರ್ಪನ್ನು ಪ್ರಶ್ನಿಸಿ ಬಿಡಿಎ ಮೇಲ್ಮನವಿ ಹೋಗಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಾಲಯವು ಬಿಡಿಎ ಪರ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಬಿಡಿಎ ಅಧಿಕಾರಿಗಳು ಸದರಿ ಜಾಗವನ್ನು ಬಿಡಿಎ ವಶಕ್ಕೆ ಪಡೆಯಲಾಗಿದೆ .ಈ ಜಾಗದ ಅಂದಾಜು ಮೌಲ್ಯ 125 ಕೋಟಿ ರೂ. ಆಗಿದೆ ಎಂದು ತಿಳಿಸಿದ್ದಾರೆ.

ಇದನ್ನು ಒದಿ : https://cnewstv.in/?p=7359

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*