Breaking News

ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ದುರಾಡಳಿತ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ.

Cnewstv.in / 06.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ದುರಾಡಳಿತ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ.

ಶಿವಮೊಗ್ಗ: ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ದುರಾಡಳಿತ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಪಾಲಿಕೆಯ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಮಹಾನಗರ ಪಾಲಿಕೆಯಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಜನವಿರೋಧಿ ಆಡಳಿತದ ಮುಖಾಂತರ ಅಧಃಪತನದತ್ತ ಸಾಗಿದೆ. ಅಧಿಕಾರಿಗಳ ಶಾಹಿಗಳ ಕೈಗೆ ಆಡಳಿತ ಒಪ್ಪಿಸಿ ಕಮಿಷನ್ ದಂಧೆಗೆ ಶಾಮಿಲಾಗಿ ಏಜೆಂಟರಾಗಿ ಭ್ರಷ್ಟಾಚಾರ ದಿವಾಳಿಯ ಅರಾಜಕತೆ ದುರಾಡಳಿತದಿಂದ ಜನರು ಬೀದಿಗೆ ಇಳಿದು ಪ್ರತಿಭಟನೆ ನಡೆಸುವ ಸ್ಥಿತಿಗೆ ಬಂದು ತಲುಪಿದೆ.

ಆಸ್ತಿ ತೆರಿಗೆ ಮತ್ತು ಖಾತೆ ಬದಲಾವಣೆಯ ಪ್ರಕ್ರಿಯೆಯಲ್ಲಿ ಬಿಜೆಪಿಯ ಸದಸ್ಯರು ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿರುವ ಅಕ್ರಮ ಪ್ರಕರಣಗಳು ಹೆಚ್ಚಾಗುತ್ತಿವೆ. ನಾಗರೀಕರು ನೇರವಾಗಿ ಪಾಲಿಕೆಗೆ ಹೋದರೆ ಅಲ್ಲಿಯ ನೌಕರರು ನಿರ್ಲಕ್ಷ್ಯ ತೋರುತ್ತಿರುವುದಕ್ಕೆ ಬಿಜೆಪಿ ಆಡಳಿತವೇ ಕಾರಣವಾಗಿದೆ. ಲಂಚ ನೀಡದಿದ್ದರೆ ನಾಗರೀಕರ ಕೆಲಸಗಳು ಆಗುತ್ತಿಲ್ಲ ಎಂದು ಆರೋಪಿಸಿದರು.ಪಾಲಿಕೆ ಆಡಳಿತವು ಶಾಸಕ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪರವರ ಕಪಿಮುಷ್ಠಿಯಲ್ಲಿರುವ ಪಾಲಿಕೆ ಆಡಳಿತದಲ್ಲಿ ವ್ಯಾಪಕ ಭ್ರಷ್ಟಾಚಾರ ಮೀತಿ ಮೀರಿದೆ. ಈಗ ನಗರದಲ್ಲಿ ನಡೆಯುತ್ತಿರುವ ಕಾಮಗಾರಿ ಕೆಲಸಗಳು ಕಳಪೆಯಿಂದ ಕೂಡಿದೆ. ಕುಡಿಯುವ ನೀರಿನ ಸರಬರಾಜು ಅವ್ಯವಸ್ಥೆಯಿಂದ ನೀರು ವ್ಯತ್ಯಯವಾಗುತ್ತಿದೆ.

ಕೊಳಚೆ ನಿರ್ಮೂಲನ ಮಂಡಳಿಯಿಂದ ಕೊಳಚೆ ಪ್ರದೇಶದಲ್ಲಿ ವಾಸವಾಗಿದ್ದ ಬಡವರಿಂದ ತಲಾ 75 ಸಾವಿರ ರೂ. ಹಣ ಕಟ್ಟಿಸಿಕೊಂಡು 3 ವರ್ಷವಾದರೂ ಹಣವೂ ಇಲ್ಲ, ಮನೆಯೂ ಇಲ್ಲದೆ ಬಡವರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ದೂರಿದರು.ಸ್ಮಾರ್ಟ್ಸಿಡಟಿ ಯೋಜನೆಯಲ್ಲಿ ಕಳಪೆ ಕಾಮಗಾರಿ ನಡೆಯುತ್ತಿದ್ದು, ನಗರದೆಲ್ಲೆಡೆ ರಸ್ತೆಗಳು ಧೂಳುನಿಂದ ವಿಲೇವಾರಿಯಾಗದೆ ಧೂಳಿನಿಂದ ಜನರು ನಿತ್ಯ ಅಲರ್ಜಿಯಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಪಾಲಿಕೆ ಆಸ್ತಿಗಳ ಕಬಳಿಕೆ ಮತ್ತು ಒತ್ತುವರಿಯಾಗುತ್ತಿದ್ದರು ಯಾವುದೇ ಕ್ರಮ ಕೈಗೊಂಡಿಲ್ಲ.

24×7 ನೀರು ಸರಬರಾಜು ಮಾಡಲು ಯೋಜನೆಯಲ್ಲಿ ಬಳಸಿರುವ ಪೈಪ್ ಹಾಗೂ ಉಪಕರಣಗಳು ಕಳಪೆಗುಣಮಟ್ಟದಾಗಿದ್ದು, ಈ ಯೋಜನೆ ಆರಂಭವಾಗಿ 3ವರ್ಷವಾದರೂ ಪೂರ್ಣವಾಗದಿದ್ದರೂ ಹೆಚ್ಚು ಮೊತ್ತದ ಬಿಲ್ ಪಾವತಿಸುವಂತೆ ಒತ್ತಡ ಹೇರಲಾಗುತ್ತಿದೆ ಹಾಗೂ ನಗರದ ವಿವಿಧೆಡೆಯಲ್ಲಿರುವ ಶುದ್ದ ನೀರಿನ ಘಟಕಗಳು ದುರಸ್ತಿ ಕಾಣದೆ ಪಾಳುಬಿದ್ದಿವೆ. ಹಸೀರಿಕರಣ ಯೋಜನೆಯಡಿ ಜನರ ತೆರಿಗೆ ಹಣ ಪರಿಸರದ ಹೆಸರಿನಲ್ಲಿ ಲೂಟಿಯಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ಇದನ್ನು ಒದಿ : https://cnewstv.in/?p=7370

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*