Breaking News

ಕಫ್ರ್ಯೂ ವೇಳೆ ಗ್ರಂಥಾಲಯ ಸೇವೆ ಹಾಗೂ ಹುಲಿ-ಸಿಂಹಧಾಮ ವೀಕ್ಷಣೆ ಬಂದ್

Cnewstv.in / 07.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಕಫ್ರ್ಯೂ ವೇಳೆ ಗ್ರಂಥಾಲಯ ಸೇವೆ ಹಾಗೂ ಹುಲಿ-ಸಿಂಹಧಾಮ ವೀಕ್ಷಣೆ ಬಂದ್

ಶಿವಮೊಗ್ಗ : ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್-19 ರೂಪಾಂತರಿ ವೈರಸ್ ಒಮಿಕ್ರಾನ್ ವೈರಾಣು ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರದ ಆದೇಶದನ್ವಯ ಜ.05 ರಿಂದ 19 ರವರೆಗೆ ವಾರಾಂತ್ಯ ಕಫ್ರ್ಯೂ ವಿಧಿಸಿರುವ ಹಿನ್ನೆಲೆಯಲ್ಲಿ ಶನಿವಾರ ಹಾಗೂ ಭಾನುವಾರ ಗ್ರಂಥಾಲಯಗಳ ಸೇವೆಯನ್ನು ಸ್ಥಗಿತಗೊಳಿಸಿ, ಮುಂದಿನ ಆದೇಶದವರೆಗೆ ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಸಾರ್ವಜನಿಕರಿಗೆ ಗ್ರಂಥಾಲಯ ಸೇವೆಯನ್ನು ಒದಗಿಸಲಾಗುವುದು ಎಂದು ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ತಿಳಿಸಿದ್ದಾರೆ.

ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ವಾರಾಂತ್ಯದಲ್ಲಿ ಕಫ್ರ್ಯೂ ಜಾರಿಯಾಗಿರುತ್ತದೆ. ಆದ್ದರಿಂದ ಜ.08, 09 15 ಮತ್ತು 16 ರಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮ ಪ್ರವಾಸಿಗರ ವೀಕ್ಷಣೆಗೆ ಲಭ್ಯವಿರುವುದಿಲ್ಲ. ಪ್ರತಿಯಾಗಿ ಜ.11 ಮತ್ತು 18 ರ ಮಂಗಳವಾರಗಳಂದು ಪ್ರವಾಸಿಗರ ವೀಕ್ಷಣೆಗೆ ಲಭ್ಯವಿರುತ್ತದೆ. ಪ್ರವಾಸಿಗರು ಕೋವಿಡ್ ನಿಯಮಾವಳಿಗಳನ್ನು ಅನುಸರಿಸಿ ಸಹಕರಿಸಬೇಕೆಂದು ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

ಇದನ್ನು ಒದಿ : https://cnewstv.in/?p=7403

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*