Cnewstv.in / 08.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಜಿಲ್ಲಾಡಳಿತ ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಸಿದ್ಧವಾಗಿದೆ.
ಶಿವಮೊಗ್ಗ : ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಮೆಗ್ಗಾನ್ ಆಸ್ಪತ್ರೆಯಲ್ಲಿ ೧೩೮೨ ಬೆಡ್ ಗಳು ಲಭ್ಯವಿದ್ದು, ೬೪೦ ಬೆಡ್ ಗಳನ್ನೂ ಕೋವಿಡಿಗಾಗಿ ಮೀಸಲಿರಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು ೯೪ ಸಾವಿರ ಕಿಲೋ ಲೀಟರ್ ಆಕ್ಸಿಜನ್ ಸಂಗ್ರಹಣಾ ಸಾಮರ್ಥ್ಯದ ವ್ಯವಸ್ಥೆ ಮಾಡಲಾಗಿದೆ.
ಕೋವಿಡ್ ಸಮರ್ಪಕ ನಿರ್ವಹಣೆಗೆ ವಾರ್ ರೂಮ್ ಆರಂಭಿಸಲಾಗಿದ್ದು, ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯಾಧಿಕಾರಿಗಳು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಜ್ಜುಗೊಳಿಸಲಾಗಿದೆ.
ನರ್ಸ್ ಗಳ ಕೊರತೆಯನ್ನು ನೀಗಿಸಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಒಟ್ಟು ೯೭.೬೭ ಶೇ. ಜನರು ಪ್ರಥಮ ಡೋಸ್ ಪಡೆದಿದ್ದು, ೮೦ ಶೇ ಜನರು ಎರಡನೇ ಡೋಸ್ ಪಡೆದಿದ್ದಾರೆ ಎಂದರು.
ಇದನ್ನು ಒದಿ : https://cnewstv.in/?p=7421
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv