Cnewstv.in / 08.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಪಂಚರಾಜ್ಯಗಳ ಚುನಾವಣಾ ದಿನಾಂಕ ಫಿಕ್ಸ್, ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ.
ನವದೆಹಲಿ : ಕೇಂದ್ರ ಚುನಾವಣಾ ಆಯೋಗ ಪಂಚರಾಜ್ಯಗಳ ಚುನಾವಣೆಗೆ ದಿನಾಂಕವನ್ನು ಪ್ರಕಟಿಸಿದೆ.
ಪಂಜಾಬ್, ಉತ್ತರಾಖಂಡ್, ಗೋವಾ, ಮಣಿಪುರ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಈ ವರ್ಷ ಸಾರ್ವತ್ರಿಕ ವಿಧಾನಸಭೆ ಚುನಾವಣೆ ನಡೆಯಲಿದ್ದು ಕೋವಿಡ್-19 ನಿಯಮಗಳ ಪಾಲನೆಯೊಂದಿಗೆ ಮತದಾನ ನಡೆಯಲಿದೆ.
ಕೋವಿಡ್-19 ಸುರಕ್ಷತಾ ಕ್ರಮಗಳ ಹಿನ್ನೆಲೆಯಲ್ಲಿ ಮತದಾನದ ಸಮಯವನ್ನು 1 ಗಂಟೆ ಹೆಚ್ಚು ವಿಸ್ತರಿಸಲಾಗಿದೆ. ಚುನಾವಣೆ ಎದುರಿಸಲಿರುವ 5 ರಾಜ್ಯಗಳಲ್ಲಿ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ. ಫೆ.10 ರಿಂದ ಮತದಾನ ಪ್ರಾರಂಭವಾಗಿ ಮಾ.7 ವರೆಗೆ ರಾಜ್ಯಗಳಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು ಮಾ.10 ಕ್ಕೆ ಫಲಿತಾಂಶ ಘೋಷಣೆಯಾಗಲಿದೆ.
ಪಂಜಾಬ್, ಗೋವಾ, ಉತ್ತರಾಖಂಡ್ ಗಳಲ್ಲಿ ಫೆ.14 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಮಣಿಪುರದಲ್ಲಿ ಫೆ.27 ರಂದು ಮೊದಲ ಹಂತ ಹಾಗೂ ಮಾ.03 ರಂದು 2 ನೇ ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶದಲ್ಲಿ 7 ಹಂತದ ಚುನಾವಣೆ ನಡೆಯಲಿದೆ.
ಇದನ್ನು ಒದಿ : https://cnewstv.in/?p=7437
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv