Cnewstv.in / 08.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಅಪ್ಪಾ ಸಾಯಬೇಡ್ರಿ ಅಂತೀವಿ, ಇಲ್ಲ ನಾವು ಸಾಯೋರೇ ಅಂತಾ ಚಂಡಿ ಹಠ ಹಿಡಿದ್ರೆ ಏನು ಮಾಡೋಣ..?
ಶಿವಮೊಗ್ಗ : ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್
ಪಾದಯಾತ್ರೆ ವಿಚಾರಕ್ಕೆ ಸಂಬಂಧಿಸಿದಂತೆ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದರು ಕೆ.ಎಸ್ ಈಶ್ವರಪ್ಪನವರು ಪ್ರತಿಕ್ರಿಯೆ ನೀಡಿದ್ದಾರೆ.
ಅಪ್ಪಾ ಸಾಯಬೇಡ್ರಿ ಅಂತೀವಿ, ಇಲ್ಲ ನಾವು ಸಾಯೋರೇ ಅಂತಾ ಚಂಡಿ ಹಠ ಹಿಡಿದ್ರೆ ಏನು ಮಾಡೋಣ..? ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರು, ನೀವು ಇಬ್ಬರೇ ಪಾದಯಾತ್ರೆ ಹೋಗುತ್ತೇವೆ ಎನ್ನುತ್ತಿದ್ದೀರಿ, ಆದರೆ ನಿಮ್ಮ ಕಾರ್ಯಕರ್ತರು ಬಿಡುವುದಿಲ್ಲ.
ನಾಳೆ ತಾ.ಪಂ., ಜಿ.ಪಂ. ಅಸ್ಲೆಂಬಿ ಚುನಾವಣೆಯಿದೆ. ಇವರ ಎದುರಿಗೆ ಶೋ ಮಾಡಬೇಕೆಂದು ತುಂಬಾ ಜನ ಬರುತ್ತಾರೆ. ಸುಮ್ಮಸುಮ್ಮನೆ ನೀವು ಏಕೆ ಸಾಯುತ್ತೀರಿ, ಅವರನ್ನು ಏಕೆ ಸಾಯಿಸುತ್ತೀರಾ? ನಾವು- ನೀವು ಒಟ್ಟಿಗೆ ಸಂತೋಷವಾಗಿ ಜೀವನ ಮಾಡೋಣ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದರು.
ರಾಜಕಾರಣ ಮಾಡುವ ಸಲುವಾಗಿ ಪಾದಯಾತ್ರೆ ಮಾಡಲೇಬೇಕೆಂದು ಹಠ ಹಿಡಿದರೆ ನನ್ನ ಅಭ್ಯಂತರವೇನಿಲ್ಲ. ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷಕ್ಕೆ ಹೋರಾಟ ಮಾಡುವ ಅವಕಾಶ ಇದೆ. ರಾಜಕಾರಣಕ್ಕೋಸ್ಕರ ಕಾಂಗ್ರೆಸ್ ಇದನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ರಾಜ್ಯದ ಜನ ಯೋಚನೆ ಮಾಡ್ತಿದ್ದಾರೆ ಎಂದರು.
ಅಧಿಕಾರದಲ್ಲಿದ್ದಾಗ ಮರೆತು ಹೋಗಿತ್ತಾ ??
ಅಧಿಕಾರದಲ್ಲಿದ್ದಾಗ ಯಾಕೆ ಕೃಷ್ಣ, ಕಾವೇರಿ, ಮೇಕೆದಾಟು ಮರೆತು ಹೋಗಿತ್ತು. ಕೇಂದ್ರದಲ್ಲಿ ಸಾಕಷ್ಟು ವರ್ಷ ಅಧಿಕಾರದಲ್ಲಿ ಇದ್ದಿರಿ, ರಾಜ್ಯದಲ್ಲಿ ಆಡಳಿತ ನಡೆಸಿದವರು ನೀವೇ. ಆಗ ಯಾಕೆ ಕೃಷ್ಣ, ಕಾವೇರಿ, ಮೇಕೆದಾಟು ಮಾಡಲಿಲ್ಲ. ಕೇಂದ್ರದಲ್ಲಿ, ರಾಜ್ಯದಲ್ಲಿ ಬಿಜೆಪಿ ಸರಕಾರ ಬರುತ್ತಿದ್ದಂತೆ ನಿಮಗೆ ಕೃಷ್ಣ, ಕಾವೇರಿ, ಮೇಕೆದಾಟು ನೆನಪಾಗಿವೆ.
ನೀವು ಹೋರಾಟ ಮಾಡಿ ನನ್ನ ಅಭ್ಯಂತರ ಇಲ್ಲ. ನೀವು ಹೋರಾಟ ಮಾಡುತ್ತಿರಬೇಕು, ನಾವು ಅಧಿಕಾರದಲ್ಲಿ ಇರಬೇಕು. ನೀವು ವಿರೋಧ ಪಕ್ಷದಲ್ಲಿ ಇರಬೇಕು. ಈ ಹೋರಾಟವನ್ನು ಕೋವಿಡ್ ಆದ ಮೇಲೆ ಮಾಡಿ, ನೀವು ಬದುಕಿರಿ. ಸ್ನೇಹಿತರಾಗಿ ಹೇಳುತ್ತಿದ್ದೇನೆ ಎಂದರು..
ಇದನ್ನು ಒದಿ : https://cnewstv.in/?p=7439
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv