Breaking News

ಜಲ್ಲಿಕಟ್ಟು ಕ್ರೀಡೆಗೂ ಗೈಡ್‌ಲೈನ್ಸ್.

Cnewstv.in / 11.01.2022 / ತಮಿಳುನಾಡು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಜಲ್ಲಿಕಟ್ಟು ಕ್ರೀಡೆಗೂ ಗೈಡ್‌ಲೈನ್ಸ್.

ತಮಿಳುನಾಡು : ತಮಿಳುನಾಡು ಸರ್ಕಾರ ಜಲ್ಲಿಕಟ್ಟು ಕ್ರೀಡಾಕೂಟ ಯೋಜನೆಗೆ ಮಾರ್ಗಸೂಚಿಯನ್ನು ಜಾರಿಗೊಳಿಸಿದೆ.

ಪೊಂಗಲ್ (ಸಂಕ್ರಾಂತಿ) ಹಬ್ಬದಂದು ತಮಿಳುನಾಡಿನಲ್ಲಿ ಜಲ್ಲಿಕಟ್ಟು ಕ್ರೀಡಾಕೂಟಗಳ ಹೆಚ್ಚಾಗಿ ಆಯೋಜನೆ ಮಾಡಲಾಗುತ್ತದೆ. ಆದರೆ ಈ ಬಾರಿ ಕೊರೊನಾ ಮೂರನೇ ಅಲೆಯ ಸಾದ್ಯತೆ ಇರುವ ಕಾರಣ ತಮಿಳುನಾಡು ಸರ್ಕಾರ ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದೆ.

ಈ ಬಾರಿ ಗೂಳಿ ಪಳಗಿಸುವವರು ಸೇರಿ 300 ಜನರಿಗೆ ಮಾತ್ರ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದು ಎಂದು ಸೂಚಿಸಲಾಗಿದೆ. ತಮಿಳುನಾಡಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿರುವ ಕಾರಣ ಆಟದ ಸಂಭ್ರಮ ಕಡಿಮೆಯಾಗುವ ಸಾಧ್ಯತೆ ಇದೆ.

ಕ್ರೀಡಾಕೂಟದಲ್ಲಿ ಭಾಗವಹಿಸುವವರಿಗೆ 48 ಗಂಟೆಗಳ ಕೋವಿಡ್ ನೆಗೆಟಿವ್ ಆರ್‌ಟಿಪಿಸಿಆರ್ ಪ್ರಮಾಣ ಪತ್ರ ಕಡ್ಡಾಯವಾಗಿದೆ. ಗೂಳಿ ಪಳಗಿಸುವವರು ಸೇರಿ 300 ಜನರು ಮಾತ್ರ ಪಾಲ್ಗೊಳ್ಳಬೇಕು. ಕ್ರೀಡಾಕೂಟವನ್ನು ವೀಕ್ಷಿಸುವುದಕ್ಕೆ ಟಿವಿ ವಾಹಿನಿಗಳಲ್ಲಿ ನೇರ ಪ್ರಸಾರ ವ್ಯವಸ್ಥೆ ಮಾಡಲಾಗುವುದು. ಗುಂಪುಗೂಡುವಿಕೆ ಬೇಡ ಎಂದು ಸರಕಾರ ಮನವಿ ಮಾಡಿದೆ.

ಕೆಲ ದಿನಗಳ ಹಿಂದೆ ಜಲ್ಲಿಕಟ್ಟು ವಿಚಾರಕ್ಕೆ ಸಂಬಂಧಪಟ್ಟಂತೆ ದಾಖಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಮದ್ರಾಸ್ ಹೈಕೋರ್ಟ್ ಕ್ರೀಡಾಕೂಟಕ್ಕೆ ಸ್ಥಳೀಯ ತಳಿಯ ಗೂಳಿಗಳನ್ನು ಬಳಸಬೇಕು. ವಿದೇಶಿ ಹೈಬ್ರಿಡ್ ತಳಿಯ ಗೂಳಿಗಳನ್ನು ಬಳಸಬಾರದು ಎಂದು ಸೂಚನೆ ನೀಡಿತ್ತು.

ಇದನ್ನು ಒದಿ : https://cnewstv.in/?p=7454

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*