Breaking News

ಬೆಳ್ಳಂಬೆಳಗ್ಗೆ ಗಿರಿನಗರ ಪೋಲಿಸರಿಂದ ರೌಡಿಶೀಟರ್ ಮೇಲೆ ಫೈರಿಂಗ್.

Cnewstv.in / 11.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಬೆಳ್ಳಂಬೆಳಗ್ಗೆ ಗಿರಿನಗರ ಪೋಲಿಸರಿಂದ ರೌಡಿಶೀಟರ್ ಮೇಲೆ ಫೈರಿಂಗ್.

ಬೆಂಗಳೂರು : ಬೆಳ್ಳಂಬೆಳಗ್ಗೆ ಗಿರಿನಗರ ಪೊಲೀಸರು ರೌಡಿ ಶೀಟರ್ ಮೇಲೆ ಫೈರಿಂಗ್ ಮಾಡಿ ಬಂದಿಸಿದ್ದಾರೆ.

ಕೊಲೆ, ದರೋಡೆ, ಕಿಡ್ನಾಪ್, ಕಳ್ಳತನ ಸೇರಿದಂತೆ ಮೂವತ್ತಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ ನರಸಿಂಹ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಲು ಹೋದಾಗ ಆರೋಪಿ ನರಸಿಂಹನು ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾನೆ ಈ ಹಿನ್ನಲೆಯಲ್ಲಿ ಪಿಎಸ್ಐ ಸುನಿಲ್ ರೆಡ್ಡಿಯವರು ಅತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ.

ಆರೋಪಿ ನರಸಿಂಹ ಅವರ ಕಾಲಿಗೆ ಗುಂಡೇಟು ಬಿದ್ದಿದ್ದು ಯಾವುದೇ ರೀತಿಯಾದ ಪ್ರಾಣಾಪಾಯವಾಗಿಲ್ಲ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇಂದು ಬೆಳಗ್ಗೆ ಆರೋಪಿ ನರಸಿಂಹ ಹೊಸಕೆರೆಹಳ್ಳಿ ಕೆರೆ ಕೋಡಿ ಬಳಿ ಇರುವ ಖಚಿತ ಮಾಹಿತಿ ಮೇರೆಗೆ ಗಿರಿನಗರ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಮೋಹನ್ ಎಂಬ ಪೇದೆಕ್ಕೆ ಚಾಕುವಿನಿಂದ ಇರಿದು ತಪ್ಪಿಸಿಕೊಳ್ಳಲು ಮುಂದಾಗಿದ್ದಾನೆ. ಇದನ್ನು ತಡೆಯಲು ಬಂದ ಪಿಎಸ್ಐ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಹೀಗಾಗಿ ಪಿಎಸ್ಐ ಗುಂಡು ಹಾರಿಸಿದ್ದಾರೆ.

ಇದನ್ನು ಒದಿ : https://cnewstv.in/?p=7456

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*