Breaking News

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 1,68,063 ಒಮಿಕ್ರಾನ್ ಸೋಂಕಿತರ ಸಂಖ್ಯೆ 4,461 ಕ್ಕೆ ಏರಿಕೆ.

Cnewstv.in / 11.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 1,68,063 ಒಮಿಕ್ರಾನ್ ಸೋಂಕಿತರ ಸಂಖ್ಯೆ 4,461 ಕ್ಕೆ ಏರಿಕೆ.

ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,68,063 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 277 ಜನ ಸಾವನ್ನಪ್ಪಿದಾರೆ.

ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ. ದೇಶದಲ್ಲಿ ಪಾಸಿಟಿವಿಟಿ ದರ 10.64 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕೊರೊನಾ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 4,461 ಕ್ಕೆ ಏರಿಕೆಯಾಗಿದೆ.

439 ಜನ ಒಮಿಕ್ರಾನ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. 69,959 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 8,21,446 ಇದೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,58,75,790 ಕ್ಕೆ ಏರಿಕೆಯಾಗಿದೆ.

ಬೂಸ್ಟರ್ ಡೋಸ್ : ಮೊದಲ ದಿನೇ ಕರ್ನಾಟಕಕ್ಕೆ 4 ಸ್ಥಾನ

ಕರ್ನಾಟಕವು 81,728 ಬೂಸ್ಟರ್ ಡೋಸ್‌ಗಳನ್ನು ನೀಡಿದ್ದು, ಗುಜರಾತ್, ಆಂಧ್ರಪ್ರದೇಶ ಮತ್ತು ರಾಜಸ್ಥಾನದ ನಂತರ ದೇಶದಲ್ಲಿ ನಾಲ್ಕನೇ ಸ್ಥಾನದಲ್ಲಿದೆ. 5,281 ಆರೋಗ್ಯ ಕಾರ್ಯಕರ್ತರು, 2,463 ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ 3,931 ವ್ಯಕ್ತಿಗಳಿಗೆ ಮೊದಲ ದಿನವೇ ಡೋಸ್ ನೀಡುವುದರೊಂದಿಗೆ ಎಲ್ಲಾ ಮೂರು ಫಲಾನುಭವಿಗಳ ವಿಭಾಗಗಳಲ್ಲಿ ಬಿಬಿಎಂಪಿ ಅಗ್ರಸ್ಥಾನದಲ್ಲಿದೆ.

ಇದನ್ನು ಒದಿ : https://cnewstv.in/?p=7459

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*