Cnewstv.in / 11.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ರೈತರ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಗುರುತಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ತಾಲ್ಲೂಕು ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ.
ಶಿವಮೊಗ್ಗ : ರೈತರ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಗುರುತಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ತಾಲ್ಲೂಕು ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಭಾರತೀಯ ಕಿಸಾನ್ ಸಂಘದ ವತಿಯಿಂದ ಮನವಿ ಸಲ್ಲಿಸಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದು 75ವರ್ಷಗಳು ತುಂಬುತ್ತಿದೆ. ರೈಲ್ವೆ, ರಸ್ತೆ, ವಿದ್ಯುನ್ಮಾನ ತಂತ್ರಜ್ಞಾನ ಅನೇಕ ಕ್ಷೇತ್ರಗಳಲ್ಲಿ ಪ್ರಗತಿಯನ್ನು ಸಾಧಿಸಿ ಮಂಗಳನ ಅಂಗಳದ ವರೆಗೂ
ತಲುಪಿದ್ದೇವೆ. ಆದರೆ ಜೀವನಕ್ಕೆ ಅತ್ಯಾವಶ್ಯಕವಾಗಿ ಬೇಕಾದ ಆಹಾರವನ್ನು ಉತ್ಪಾದಿಸುವ ಕೃಷಿ ಕ್ಷೇತ್ರವು ಇಂದು ದುಸ್ಥಿತಿಯತ್ತ ಸಾಗುತ್ತಿದೆ. 1990ರ ದಶಕದಿಂದ 3.5 ಲಕ್ಷಕ್ಕೂ ಅಧಿಕ ರೈತರು ಆತ್ಮ ಹತ್ಯೆಯ ದಾರಿ ಹಿಡಿದಿದ್ದಾರೆ. ಪ್ರತಿ ವರ್ಷ ಕೃಷಿ ತೆಜಿಸಿ ನಗರದ ಸಾಗುತ್ತಿರುವವರ ಸಂಖ್ಯೆ ಗಣನೀಯವಾಗಿ ಏರುತ್ತಿದೆ. ರೈತರು ತಾವು ಬೆಳೆದ ಬೆಳೆಗಳ ಒಳಸುರಿಗಳ ವೆಚ್ಚ ಅದಕ್ಕಾಗಿ ಪ್ರಕೃತಿ ವಿಕೋಪದಿಂದ ನಷ್ಟ ಉಂಟಾತಿ ಮತ್ತು ಲಾಭದಾಯ ಬೆಲೆ ಸಿಗದ ಕಾರಣ ಕೃಷಿಯಿಂದ ವಿಮುಕರಾಗುತ್ತಿದ್ದಾರೆ.
ಬೇರೆ ಕ್ಷೇತ್ರಗಳ ಉತ್ಪಾದಕರು ತಾವು ಉತ್ಪಾದಿಸಿದ ಉತ್ಪನ್ನಗಳಿಗೆ ತಾವೇ ದರ ನಿಗಪಡಿಸುತ್ತಾರೆ. ಆದರೆ ರೈತನಿಗೆ ಮಾತ್ರ ಇದು ಸಾಧ್ಯವಾಗುತ್ತಿಲ್ಲ. ಮಧ್ಯವರ್ತಿಗಳು ದರ ನಿಗಧಿಮಾಡುತ್ತಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದರೆ ಕೃಷಿ ಕ್ಷೇತ್ರ ಅವನತಿಗೊಂಡು ಅಭಾವ ಉಂಟಾಗುತ್ತದೆ. ಈ ವ್ಯವಸ್ಥೆ ಸರಿಯಾಗಬೇಕಾದರೆ ರೈತರಿಗೆ ಉತ್ಪಾದನಾ ವೆಚ್ಚದ ಆಧಾರದ ಮೇಲೆ ಲಾಭದಾಯಕ ಬೆಲೆ ದೊರೆಯುವಂತಾಗಬೇಕು. ರೈತರ ಆದಾಯ ದ್ವಿಗುಣಗೊಳ್ಳಬೇಕೆಂಬುದು ಕೇಂದ್ರ ಸರ್ಕಾರದ ಒಳ್ಳೆಯ ಚಿಂತನೆ ಸರಿ ಆದರೆ ಸರ್ಕಾರ ಕೇವಲ ಕನಿಷ್ಟ ಬೆಂಬಲ ಬೆಲೆಯನ್ನು (ಎಂ.ಎಸ್.ಪಿ) ಘೋಷಿಸಿದರೆ
ಸಾಲದು ಎಂದು ತಿಳಿಸಿದರು.
ಇದನ್ನು ಒದಿ : https://cnewstv.in/?p=7477
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments