Cnewstv.in / 11.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಸಚಿವ ಮಾಧುಸ್ವಾಮಿಗೆ ಕೊರೋನಾ ಪಾಸಿಟಿವ್. ಮೂರ್ನಾಲ್ಕು ದಿನಗಳಿಂದ ಸಿಎಂ ಸಂಪರ್ಕದಲ್ಲಿದ್ದ ಸಚಿವರು, ಅಧಿಕಾರಿಗಳಿಗೆ ಡವಡವ.
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಅದರಲ್ಲಿಯೂ ಮೂರನೇಯ ಅಲೆ ಅತ್ಯಂತ ವೇಗವಾಗಿ ಹರಡುತ್ತಿದೆ.
ನೆನ್ನೆ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ಇರುವುದು ದೃಡಪಟ್ಟಿದೆ. ಇಂದು ಅವರ ಸಂಪುಟದ ಮತ್ತೊಬ್ಬ ಹಿರಿಯ ಸಚಿವರಾದ ಜೆ.ಸಿ. ಮಾಧುಸ್ವಾಮಿಯವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಎ ಸಿಂಪ್ಟಮ್ಯಾಟಿಕ್ ಆಗಿರುವ ಸಚಿವ ಮಾಧುಸ್ವಾಮಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ನಿನ್ನೆ ಸಿಎಂ ಜೊತೆಗೆ ಸಭೆಯಲ್ಲಿ ಭಾಗಿಯಾಗಿದ್ದರು. ಇನ್ನು ಅವರ ಸಂಪರ್ಕದಲ್ಲಿ ಅವರ ಪುತ್ರಿಗೂ ಸಹ ಕೊರೊನಾ ಪಾಸಿಟಿವ್ ವರದಿಯಾಗಿದೆ.
ನಿನ್ನೆಯಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೊನಾ ಸೋಂಕು ದೃಢವಾಗಿತ್ತು. ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದರು. ಸೌಮ್ಯ ಲಕ್ಷಣಗಳು ಇದ್ದದ್ದರಿಂದ ಕೊರೊನಾ ಪರೀಕ್ಷೆ ಮಾಡಿಸಿದೆ. ವರದಿಯಲ್ಲಿ ಪಾಸಿಟಿವ್ ಬಂದಿದೆ. ನಾನು ಆರೋಗ್ಯವಾಗಿದ್ದೇನೆ. ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಸ್ವಯಂ ಐಸೊಲೇಟ್ ಆಗಿರುವಂತೆ ತಿಳಿಸಿದ್ದರು.
ಇನ್ನೂ ಕಳೆದ ಮೂರು ನಾಲ್ಕು ದಿನಗಳಿಂದ ಮುಖ್ಯಮಂತ್ರಿಗಳೊಂದಿಗೆ ಸಂಪರ್ಕದಲ್ಲಿದ್ದ ಸಚಿವರು ಹಾಗೂ ಅಧಿಕಾರಿಗಳಿಗೆ ಡವಡವ ಶುರುವಾಯಿತು. ಆರೋಗ್ಯ ಸಚಿವರಾದ ಸುಧಾಕರ್ ಅವರು ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಇದನ್ನು ಒದಿ : https://cnewstv.in/?p=7477
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv