Cnewstv.in / 11.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಸಿಎಂ ವರ್ಚುವಲ್ ಮೀಟಿಂಗ್, ಕೆಲವೇ ಕ್ಷಣಗಳಲ್ಲಿ ಲಾಕ್ ಡೌನ್ ಭವಿಷ್ಯ.
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿಯವರು ಮಣಿಪಾಲ್ ಆಸ್ಪತ್ರೆಯಿಂದ ಇಂದು ವರ್ಚುವಲ್ ಸಭೆ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಮತ್ತಷ್ಟು ಟಫ್ ರೂಲ್ಸ್ ಜಾರಿ ಮಾಡುವ ಸಾಧ್ಯತೆ ಇದೆ. ಫೆಬ್ರವರಿ ಅಂತ್ಯದ ವೇಳೆಗೆ 50,000 ಕೇಸ್ ಬರಬಹುದು ಎಂದು ಎಂದು ತಜ್ಞರು ಅಂದಾಜಿಸಿದ್ದಾರೆ.
ನೆರೆ ರಾಜ್ಯಗಳ ಕೊರೊನಾ ಮಾಹಿತಿಯನ್ನು ಪಡೆದ ಸಿಎಂ, ಒಂದು ಗಂಟೆಯಿಂದ ಮಹತ್ವದ ಚರ್ಚೆ ನಡೆಸುತ್ತಾರೆ.
ರಾಜ್ಯದಲ್ಲಿ ಲಾಕ್ ಡೌನ್ ಆಗುತ್ತಾ, ಅಥವಾ ಇನ್ನಷ್ಟು ಕಠಿಣ ಕೋವಿಡ್ ನಿಯಮಗಳನ್ನು ಜಾರಿಗೆ ತರುವುದರ ಬಗ್ಗೆ ಈ ಸಭೆಯಲ್ಲಿ ನಿರ್ಧಾರವಾಗಲಿದೆ. ಒಟ್ಟಿನಲ್ಲಿ ಕೆಲವೇ ಕ್ಷಣಗಳಲ್ಲಿ ಲಾಕ್ ಡೌನ್ ಭವಿಷ್ಯ ನಿರ್ಧಾರವಾಗಲಿದೆ.
ಆರೋಗ್ಯ ಸಚಿವ ಕೆ ಸುಧಾಕರ್, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಬಿಬಿಎಂಪಿ ಆಯುಕ್ತ, ಅರಗ ಜ್ಞಾನೆಂದ್ರ, ರವಿಕುಮಾರ್ ಸೇರಿದಂತೆ ಆರೋಗ್ಯ ಅಧಿಕಾರಿಗಳು, ಸಭೆಯಲ್ಲಿ ಭಾಗವಹಿಸಿದ್ದಾರೆ.
ಇದನ್ನು ಒದಿ : https://cnewstv.in/?p=7482
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv