Breaking News

ಸಿಎಂ ವರ್ಚುವಲ್ ಮೀಟಿಂಗ್ : ಸಭೆಯ ಪ್ರಮುಖ ಅಂಶಗಳು 

Cnewstv.in / 12.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರು, ಕೋವಿಡ್ ನಿಯಂತ್ರಣ ಮುಂಜಾಗೃತಾ ಕ್ರಮವಾಗಿ ಜಾರಿಗೊಳಿಸಬಹುದಾದ ಮಾರ್ಗಸೂಚಿಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ತಜ್ಞರ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮವಾಗಿ ಜಾರಿಗೊಳಿಸಬಹುದಾದ ಮಾರ್ಗಸೂಚಿಗಳ ಬಗ್ಗೆ ಚರ್ಚಿಸಲಾಗಿತ್ತು.

ಸಭೆಯ ಪ್ರಮುಖ ಅಂಶಗಳು :

*ಕೋವಿಡ್ ಮುಂಜಾಗ್ರತೆ ಕ್ರಮವಾಗಿ ಜಾರಿಗೊಳಿಸುವ ಮಾರ್ಗಸೂಚಿಗಳನ್ನು ಈ ತಿಂಗಳ ಅಂತ್ಯದ ವರೆಗೆ ವಿಸ್ತರಣೆ ಮಾಡಲಾಗಿದೆ.

* ಬೆಂಗಳೂರಿನಲ್ಲಿ ಕೂಡಲೇ 27 ಕೋವಿಡ್ ಕೇರ್ ಸೆಂಟರುಗಳನ್ನು ಪ್ರಾರಂಭಿಸಲು ಸೂಚಿಸಿದರು.

* ಕೋವಿಡ್ ಲಸಿಕೆಯ ಎರಡೂ ಡೋಸ್ ಗಳನ್ನು ಪಡೆದು 9 ತಿಂಗಳು ಪೂರೈಸಿದ ಮುಂಚೂಣಿಯ ಕಾರ್ಯಕರ್ತರಿಗೆ 3ನೇ ಡೋಸ್ ಅನ್ನು ಆದ್ಯತೆಯ ಮೇರೆಗೆ ನೀಡಲು ಸೂಚಿಸಿದರು.

* ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮವಾಗಿ ವಿಧಿಸಿರುವ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಯಿತು.

* ಶಾಲಾ ಮಕ್ಕಳಲ್ಲಿ ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆ, ಪ್ರಕರಣಗಳನ್ನು ಆಧರಿಸಿ ಬಿಇಓ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ವರದಿಯನ್ನು ಆಧರಿಸಿ, ಶಾಲೆಗಳನ್ನು ಮುಚ್ಚುವ ಕುರಿತು ತೀರ್ಮಾನ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

* ಬಿಬಿಎಂಪಿ ವ್ಯಾಪ್ತಿಯಲ್ಲಿ ಪರೀಕ್ಷಾ ಪ್ರಮಾಣವನ್ನು ದಿನಕ್ಕೆ 1.3 ಲಕ್ಷ ವರೆಗೆ ಹೆಚ್ಚಿಸಲು ಸೂಚಿಸಿದರು.

*ಮೂರನೇ ಅಲೆಯಲ್ಲಿ ಹೋಮ್ ಐಸೋಲೇಷನ್ ನಲ್ಲಿ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇವರ ಆರೋಗ್ಯ ಸ್ಥಿತಿಯ ಮೇಲ್ವಿಚಾರಣೆಯನ್ನು ನಿಯಮಿತವಾಗಿ ಮಾಡುವಂತೆ ಹಾಗೂ ಸೂಕ್ತ ಔಷಧಿಗಳ ಕಿಟ್ ಅನ್ನು ಒದಗಿಸುವಂತೆ ಸೂಚಿಸಿದರು.

* ಪರೀಕ್ಷಾ ವರದಿ ಬಂದ ಕೂಡಲೇ ಸೋಂಕಿತರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿ, ಆಸ್ಪತ್ರೆಗೆ ದಾಖಲಿಸುವ ಅಗತ್ಯವಿದೆಯೇ ಇಲ್ಲವೇ ಎಂದು ನಿರ್ಧರಿಸುವ ಟ್ರಯಾಜಿಂಗ್ ವ್ಯವಸ್ಥೆಯನ್ನು ಬಲಪಡಿಸುವಂತೆ ಸೂಚಿಸಿದರು.

* ಹೋಮ್ ಐಸೊಲೇಷನ್ ಮತ್ತು ಟ್ರಯಾಜಿಂಗ್ ಪ್ರಕ್ರಿಯೆಯಲ್ಲಿ ಹೌಸ್ ಸರ್ಜನ್ ವೈದ್ಯರು ಹಾಗೂ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ನಿರ್ಧರಿಸಲಾಯಿತು.

* ಶಿಕ್ಷಣ ಮತ್ತು ಆರೋಗ್ಯ ಇಲಾಖೆಗಳು ಜಂಟಿಯಾಗಿ ಎಲ್ಲ ಶಾಲೆಗಳಲ್ಲಿ 15 ದಿನಗಳಿಗೊಮ್ಮೆ ಮಕ್ಕಳ ಸಾಮಾನ್ಯ ಆರೋಗ್ಯ ತಪಾಸಣೆ ಮಾಡುವಂತೆ ಸೂಚಿಸಲಾಗಿದೆ.

* ಮುಂಬರುವ ಸಂಕ್ರಾಂತಿ, ವೈಕುಂಠ ಏಕಾದಶಿ ಮತ್ತಿತರ ಹಬ್ಬಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಕಂದಾಯ ಮತ್ತು ಮುಜರಾಯಿ ಇಲಾಖೆಗೆ ಸೂಚಿಸಿದರು.

* ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತ ಮಕ್ಕಳಿಗೆ ಚಿಕಿತ್ಸೆ ನೀಡಲು ಮಕ್ಕಳ ವಾರ್ಡ್, ಐಸಿಯುಗಳನ್ನು ಮೀಸಲಿರಿಸಲು ಸೂಚಿಸಲಾಗಿದೆ.

* ಯಾವುದೇ ರೀತಿಯ ಸಾರ್ವಜನಿಕ ಸಮಾವೇಶಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

* ಮಾರುಕಟ್ಟೆ ಪ್ರದೇಶದಲ್ಲಿ ಜನದಟ್ಟಣೆ ಕಡಿಮೆಗೊಳಿಸಲು ವಸ್ತುಸ್ಥಿತಿ ಆಧರಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಇದನ್ನು ಒದಿ : https://cnewstv.in/?p=7497

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*