Cnewstv.in / 12.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಕೇಂದ್ರ ಸರ್ಕಾರದಿಂದ ತೆರಿಗೆ ಪಾವತಿದಾರರಿಗೆ ಸಿಹಿ ಸುದ್ದಿ.
ನವದೆಹಲಿ: ತೆರಿಗೆ ಪಾವತಿದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಗಡುವನ್ನು ವಿಸ್ತರಿಸಿದೆ.
ಆದಾಯ ತೆರಿಗೆ ರಿಟರ್ನ್ಸ್ ಸರಾಗವಾಗಿ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಮತ್ತು ಕೋವಿಡ್-19 ಕಾರಣದಿಂದ ತೆರಿಗೆದಾರರು ಎದುರಿಸುತ್ತಿರುವ ತೊಂದರೆಗಳನ್ನು ಪರಿಗಣಿಸಿ 2021-2022ನೇ ಸಾಲಿನ ಮೌಲ್ಯಮಾಪನ ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಕೊನೆಯ ದಿನಾಂಕವನ್ನು ಮಾರ್ಚ್ 15ರ ವರೆಗೆ ವಿಸ್ತರಿಸಲಾಗಿದೆ ಎಂದು ಹಣಕಾಸು ಸಚಿವಾಲಯ ಟ್ವೀಟ್ ಮಾಡಿದೆ.
ಈ ಹಿಂದೆ ಡಿಸೆಂಬರ್ 31ರ ಗಡುವನ್ನು ವಿಸ್ತರಿಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿತ್ತು. ಆದರೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಸಮಸ್ಯೆಗಳ ಕುರಿತು ಹಲವು ಬಳಕೆದಾರರು ಟ್ವೀಟ್ ಗಡುವು ವಿಸ್ತರಿಸುವಂತೆ ಮನವಿ ಮಾಡಿದ್ದರು.
ಡಿಸೆಂಬರ್ 31 ರ ಗಡುವು ಸಾಕಾಗುವುದಿಲ್ಲ ಎಂದು ಕೆಲವರು ಐಟಿ ಪೋರ್ಟಲ್ ಸಮಸ್ಯೆಗಳ ಸ್ಕ್ರೀನ್ ಶಾಟ್ ತೆಗೆದು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ತೆರಿಗೆ ಪಾವತಿದಾರರಿಗೆ ಐಟಿ ರಿಟರ್ನ್ಸ್ ಸಲ್ಲಿಕೆಗೆ ಗಡುವನ್ನು ವಿಸ್ತರಿಸಿದೆ.
ಇದನ್ನು ಒದಿ : https://cnewstv.in/?p=7499
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv