Cnewstv.in / 12.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ : ಹೈಕೋರ್ಟ್ ನಿಂದ ಕೆಪಿಸಿಸಿ, ರಾಜ್ಯ ಸರ್ಕಾರಕ್ಕೆ ನೋಟಿಸ್
ಬೆಂಗಳೂರು : ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಆರೋಪ-ಪ್ರತ್ಯಾರೋಪಗಳ ನಡುವೆ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಸಾಮಾಜಿಕ ಕಾರ್ಯಕರ್ತ ನಾಗೇಂದ್ರಪ್ರಸಾದ್, ಸಾರ್ವಜನಿಕ ಹಿತಾಸಕ್ತಿ ಅರ್ಜಿ (PLI) ಸಲ್ಲಿಸಿ ನೀಡಿದ್ದ ಕೇಸ್ ಇದೀಗ ಹೈಕೋರ್ಟ್ ಗೆ ತಲುಪಿದೆ.
ರಾಜ್ಯದಲ್ಲಿ ದಿನೇದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ವತಿಯಿಂದ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ಬಗ್ಗೆ ಹೈಕೋರ್ಟ್ ಗರಂ ಅಗಿದ್ದು, ರಾಮನಗರ ಜಿಲ್ಲಾಡಳಿತ, ಬಿಬಿಎಂಪಿ ಹಾಗೂ ಕೆಪಿಸಿಸಿಗೆ ರಾಜ್ಯ ಹೈಕೋರ್ಟ್ ನೋಟೀಸ್ ನೀಡಿದೆ.
ಕೆಪಿಸಿಸಿಗೆ ನೋಟೀಸ್ :
ತುರ್ತು ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠ, ರಾಜ್ಯದಲ್ಲಿ ಕೊರೊನಾ ಹೆಚ್ಚುತ್ತಿರುವ ಈ ಸಮಯದಲ್ಲಿ ಪಾದಯಾತ್ರೆ ನಡೆಸುತ್ತಿದ್ದಿರಿ, ಇದಕ್ಕೆ ಸರ್ಕಾರದ ಅನುಮತಿ ಪಡೆದಿದ್ದೀರಾ ?? ಎಂದು ನೇರ ಪ್ರಶ್ನೆ ಮಾಡಿದ್ದು, ನಾಳೆಯೊಳಗೆ ಉತ್ತರಿಸಬೇಕು ಎಂದು ಹೈಕೋರ್ಟ್ ವಿಭಾಗೀಯ ಪೀಠ ಕೆಪಿಸಿಸಿಗೆ ನೋಟಿಸ್ ಜಾರಿ ಮಾಡಿದೆ.
ರಾಜ್ಯ ಸರ್ಕಾರಕ್ಕೆ ನೋಟಿಸ್ :
ಹೈಕೋರ್ಟ್ ವಿಭಾಗೀಯ ಪೀಠ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದು, ನೀವು ರ್ಯಾಲಿಗೆ ಅನುಮತಿ ನೀಡಿದ್ದೀರಾ?? ಅನುಮತಿ ನೀಡಿಲ್ಲ ಅದರೆ ಪಾದಯಾತ್ರೆ ವಿರುದ್ಧ ಕ್ರಮವನ್ನು ಏಕೆ ತೆಗೆದುಕೊಂಡಿಲ್ಲ ?? ಯಾರಿಗಾಗಿ ಕಾಯುತ್ತಿದ್ದೀರಿ ?? ಎಂದು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಇದನ್ನು ಒದಿ : https://cnewstv.in/?p=7501
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv