Cnewstv.in / 12.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಶಿವಮೊಗ್ಗ ಜಿಲ್ಲೆಗೆ ನೂತನ ಡಿಸಿ ಯಾಗಿ ಡಾ.ಸೆಲ್ವಮಣಿ ಆರ್
ಶಿವಮೊಗ್ಗ : ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಸೆಲ್ವಮಣಿಯವರು ಅಧಿಕಾರ ಸ್ವೀಕರಿಸಿದ್ದಾರೆ.
ಕೋಲಾರದ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಸೆಲ್ವಮಣಿಯವರು ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿದ್ದಾರೆ. ಕೆ.ಬಿ.ಶಿವಕುಮಾರ್ ರವರು ಹೂಗುಚ್ಚ ನೀಡುವ ಮೂಲಕ ಅವರಿಗೆ ಸ್ವಾಗತ ಕೋರಿದರು.
ಈಗಾಗಲೇ ಜಿಲ್ಲಾಧಿಕಾರಿಗಳ ವರ್ಗಾವಣೆಯಾಗುತ್ತದೆ ಎಂಬ ವದಂತಿ ಹಬ್ಬಿತ್ತು, ವದಂತಿಯಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ರವರು ವರ್ಗಾವಣೆಯಾಗಿ ನೂತನ ಜಿಲ್ಲಾಧಿಕಾರಿಯಾಗಿ ಡಾ. ಸೆಲ್ವಮಣಿಯವರು ಅಧಿಕಾರ ಸ್ವೀಕರಿಸಿದ್ದಾರೆ.
ಆಗಸ್ಟ್ 2019 ರಂದು ಜಿಲ್ಲಾಧಿಕಾರಿಯಾಗಿ ಬಂದಿದ್ದ ಕೆ.ಬಿ.ಶಿವಕುಮಾರ್ ಅವರು ತಮ್ಮ ಅಧಿಕಾರವಧಿಯಲ್ಲಿ ಸಾಕಷ್ಟು ಜನಪರ ಕಾರ್ಯಗಳನ್ನು ಮಾಡಿದರು. ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿದ್ದು, ಗ್ರಾಮ ವಾಸ್ತವ್ಯ ಮಾಡಿ ಜನರ ಸಮಸ್ಯೆಗಳನ್ನು ಆಲಿಸಿದರು. ಕೋವಿಡ್ ಮೊದಲನೇ ಮತ್ತು ಎರಡನೇ ಅಲೆಯನ್ನು ಜಿಲ್ಲೆಯಲ್ಲಿ ಯಾವುದೇ ತೊಂದರೆಯಾಗದಂತೆ ಅತ್ಯುತ್ತಮವಾಗಿ ನಿರ್ವಹಿಸಿದ್ದರು.
https://www.facebook.com/235824330676008/posts/985901289001638/?sfnsn=wiwspmo
ಇದನ್ನು ಒದಿ : https://cnewstv.in/?p=7505
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv