Breaking News

ಕಾಂಗ್ರೆಸ್ ಪಾದಯಾತ್ರೆಗೆ ಬೀಳುತ್ತಾ ಬ್ರೇಕ್ ??

Cnewstv.in / 12.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಕಾಂಗ್ರೆಸ್ ಪಾದಯಾತ್ರೆಗೆ ಬೀಳುತ್ತಾ ಬ್ರೇಕ್ ??

ರಾಮನಗರ : ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕಳೆದ 4 ದಿನಗಳಿಂದ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ ಪಾದಯಾತ್ರೆಗೆ ಬ್ರೇಕ್ ಬೀಳುವ ಸಾಧ್ಯತೆ ಇದೆ.

ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಸಾಮಾಜಿಕ ಕಾರ್ಯಕರ್ತ ನಾಗೇಂದ್ರಪ್ರಸಾದ್, ಸಾರ್ವಜನಿಕ ಹಿತಾಸಕ್ತಿ ಅರ್ಜಿ (PLI) ಸಲ್ಲಿಸಿ ನೀಡಿದ್ದ ಕೇಸ್ ಹೈಕೋರ್ಟ್ ಮೆಟ್ಟಿಲೇರಿತ್ತು.

ತುರ್ತು ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠ, ರಾಜ್ಯದಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ರಾಮನಗರ ಜಿಲ್ಲಾಡಳಿತ, ಬಿಬಿಎಂಪಿ ಹಾಗೂ ಕೆಪಿಸಿಸಿಗೆ ತಕ್ಷಣವೇ ಉತ್ತರಿಸುವಂತೆ ನೋಟಿಸ್ ನೀಡಿತ್ತು.

ಈ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾಡಳಿತ ನಾಳೆ ಪಾದಯಾತ್ರೆಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಮತ್ತೊಂದೆಡೆ ಕಾಂಗ್ರೆಸ್ ಪಕ್ಷದಿಂದಲೇ ಪಾದಯಾತ್ರೆ ನಿಲ್ಲಿಸಲಾಗುತ್ತಿದೆ ಎಂಬ ಮಾತುಗಳು ಸಹ ಕೇಳಿ ಬರುತ್ತಿದೆ.

ಒಟ್ಟಿನಲ್ಲಿ ರಾಜ್ಯ ಹೈಕೋರ್ಟ್ ನೀಡಿರುವ ನೋಟೀಸ್ ಗೆ ಜಿಲ್ಲಾಡಳಿತ ಹಾಗೂ ಕೆಪಿಸಿಸಿ ಯಾವ ರೀತಿ ಉತ್ತರ ನೀಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನು ಒದಿ : https://cnewstv.in/?p=7514

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*