Cnewstv.in / 13.01.2022 / ಉತ್ತರಪ್ರದೇಶ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಬಿಜೆಪಿ ತೊರೆದ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ. ಅಖಿಲೇಶ್ ಯಾದವ್ ನೊದಿಗಿನ ಫೋಟೋ ಟ್ವಿಟರ್ ನಲ್ಲಿ ವೈರಲ್.
ಉತ್ತರಪ್ರದೇಶ : ಉತ್ತರ ಪ್ರದೇಶದ ಯೋಗಿ ಸಂಪುಟಕ್ಕೆ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಶಾಕ್ ನೀಡಿದ್ದರು. ಬಿಜೆಪಿ ಪಕ್ಷವನ್ನು ತೊರೆದು ರಾಜೀನಾಮೆಯನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದರು.
ಬಿಜೆಪಿ ತೊರೆದ ಮಾಜಿ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ವಿರುದ್ಧ ಬಂಧನ ವಾರೆಂಟ್ ಜಾರಿಯಾಗಿದೆ. ಪಕ್ಷಕ್ಕೆ ರಾಜೀನಾಮೆ ನೀಡಿದ ಒಂದು ದಿನದೊಳಗೆ ಈ ಬೆಳವಣಿಗೆ ನಡೆದಿದ್ದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವು ದಲಿತರು, ರೈತರು, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಗಳು ಮತ್ತು ನಿರುದ್ಯೋಗಿ ಯುವಕರ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ್ದರು.
ಸ್ವಾಮಿ ಪ್ರಸಾದ್ ಮೌರ್ಯ ತಮ್ಮ ರಾಜೀನಾಮೆ ಪತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಕೆಲವೇ ನಿಮಿಷಗಳ ನಂತರ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ನೊದಿಗಿನ ಫೋಟೋವನ್ನು ಟ್ವೀಟ್ ಮಾಡಿ, ಸಮಾಜವಾದಿ ಪಕ್ಷ ಸೇರುತ್ತಿರುವ ಬಗ್ಗೆ ಮಾಹಿತಿ ನೀಡಿದ್ದರು ಹಾಗೂ ಅ ಪೋಟೊಗಳು ಸಖತ್ ವೈರಲ್ ಅಗಿದೆ.
ಇದನ್ನು ಒದಿ : https://cnewstv.in/?p=7516
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv