Breaking News

ಒಮಿಕ್ರಾನ್ ಬಗ್ಗೆ ನಿರ್ಲಕ್ಷ ಬೇಡ

Cnewstv.in / 13.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಒಮಿಕ್ರಾನ್ ಬಗ್ಗೆ ನಿರ್ಲಕ್ಷ ಬೇಡ

ನವದೆಹಲಿ : ಕೊರೊನಾ ರೂಪಾಂತರಿ ಒಮಿಕ್ರಾನ್ ಬಗ್ಗೆ ಜನರು ನಿರ್ಲಕ್ಷ್ಯ ಭಾವನೆ ತೋರುತ್ತಿರುವುದು ಬೇಡ. ಎಲ್ಲರೂ ಲಸಿಕೆಯನ್ನು ತೆಗೆದುಕೊಳ್ಳಿ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಜನರಿಗೆ ಕರೆ ನೀಡಿದೆ.

ಕೊರೊನಾ ವೈರಸ್ ರೂಪಾಂತರ ಒಮಿಕ್ರಾನ್ ಸಾಮಾನ್ಯ ನೆಗಡಿ ಜ್ವರ ಎಂದು ಹಗುರವಾಗಿ ಪರಿಗಣಿಸಬೇಡಿ. ಈಗಾಗಲೇ ದೇಶದ ಅನೇಕ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇ. 5 ಕ್ಕಿಂತ ಹೆಚ್ಚಾಗಿದೆ.

ಒಂದು ದಿನಕ್ಕೆ ದೇಶಾದ್ಯಂತ ಸೋಂಕಿತರ ಸಂಖ್ಯೆ 2 ಲಕ್ಷ ಸಮೀಪಕ್ಕೆ ಬರುತ್ತಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಂಕಿತರ ಪಾಸಿಟಿವಿಟಿ ದರ 26.22 ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ನವದೆಹಲಿ, ತಮಿಳುನಾಡು, ಕರ್ನಾಟಕ, ಉತ್ತರ ಪ್ರದೇಶ, ಕೇರಳ ಮತ್ತು ಗುಜರಾತುಗಳಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.

ಎಲ್ಲರೂ ಕೊರೊನಾ ಲಸಿಕೆಯನ್ನು ಪಡೆಯಬೇಕು ಕೊರೊನಾ ಮಾರ್ಗಸೂಚಿಯನ್ನು ಪಾಲನೆ ಮಾಡಬೇಕು. ಇಲ್ಲವಾದರೆ ಮುಂದಿನ ದಿನಗಳನ್ನು ಎದುರಿಸುವುದು ಕಷ್ಟವಾಗುತ್ತದೆ. ವೈದ್ಯಕೀಯ ಆಮ್ಲಜನಕ ದಾಸ್ತಾನು ಇರುವಂತೆ ನೋಡಿಕೊಳ್ಳಿ ಎಂದು ಕೇಂದ್ರ ರಾಜ್ಯಗಳಿಗೆ ಸೂಚನೆಯನ್ನು ನೀಡಲಾಗಿದೆ.

ಕರ್ನಾಟಕದ ಸಿಎಂ ಬಸವರಾಜ್ ಬೊಮ್ಮಾಯಿ, ಪಂಜಾಬ್ ಸಿಎಂ ಕ್ಯಾ. ಅಮರಿಂದರ್ ಸಿಂಗ್,‌ ಕೇಂದ್ರ ಸಚಿವ ನಿತಿನ್ ಗಡ್ಕರಿ, ಸೇರಿದಂತೆ ಅನೇಕ ನಾಯಕರು ಸಹ ಕೊರೊನಾ ದೃಢಪಟ್ಟಿದೆ. ಜನರು ಅತ್ಯಂತ ಎಚ್ಚರದಿಂದ ಇರಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದನ್ನು ಒದಿ : https://cnewstv.in/?p=7518

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*