Breaking News

ಬೆಂಗಳೂರು : 1 ರಿಂದ 9 ನೇ ತರಗತಿಗಳು ಬಂದ್

Cnewstv.in / 13.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಬೆಂಗಳೂರು : 1 ರಿಂದ 9 ನೇ ತರಗತಿಗಳು ಬಂದ್

ಬೆಂಗಳೂರು : ರಾಜಧಾನಿಯಲ್ಲಿ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 1 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ರಜೆಯನ್ನು ಜನವರಿ 31 ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಈ ಮೊದಲು ಜನವರಿ 19ರವರೆಗೆ ಮಾತ್ರ ಶಾಲೆಗಳಿಗೆ ರಜೆ ನೀಡಲಾಗಿತ್ತು. ಆದರೆ ದಿನದಿಂದ ದಿನಕ್ಕೆ ಕೊರೋನಾ ಸೋಂಕಿನ ಪ್ರಮಾಣ ವ್ಯಾಪಕವಾಗಿ ಹೆಚ್ಚಳವಾಗುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಸೋಂಕು ಮಿತಿ ಮೀರುತ್ತಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳ ರಜೆ ವಿಸ್ತರಣೆ ಮಾಡಲಾಗಿದೆ.

1 ರಿಂದ 9ನೇ ತರಗತಿಗಳು ಆನ್‌ಲೈನ್‌ನಲ್ಲಿ ನಡೆಯುತ್ತವೆ. ಆದಾಗ್ಯೂ, ಕೋವಿಡ್-19 ಪ್ರಕರಣಗಳ ಹೆಚ್ಚಳದಿಂದಾಗಿ ಇದು ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಶಾಲೆಗಳಿಗೆ ಮಾತ್ರ ಅನ್ವಯವಾಗುತ್ತದೆ. ಸೋಂಕುಗಳು ಹೆಚ್ಚಾಗಿದ್ದರೂ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಇದೆ ಮತ್ತು ಮಕ್ಕಳ ಮೇಲೆ ಕಡಿಮೆ ಪರಿಣಾಮ ಬೀರುವುದರಿಂದ ಇತರ ಜಿಲ್ಲೆಗಳಲ್ಲಿ ಶಾಲೆಗಳನ್ನು ಮುಚ್ಚದಂತೆ ಸಚಿವರು ಸಲಹೆ ನೀಡಿದರು.

ಪ್ರಸ್ತುತ ಬೆಂಗಳೂರಿನಲ್ಲಿ 10, 11, 12ನೇ ತರಗತಿ ನಡೆಸುತ್ತಿದ್ದೇವೆ. ಗ್ರಾಮಾಂತರ ಪ್ರದೇಶದಲ್ಲಿ ಕೊರೋನಾ ಸೋಂಕು ಕಡಿಮೆಯಿದೆ. ಮಕ್ಕಳ ಶಿಕ್ಷಣದ ಮೇಲೆ ಪರಿಣಾಮ ಬೀರದಂತೆ ಸೂಕ್ತ ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಇದನ್ನು ಒದಿ : https://cnewstv.in/?p=7521

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*