Breaking News

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಬರೋಬ್ಬರಿ 2.47 ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 5,488 ಕ್ಕೆ ಏರಿಕೆ.

Cnewstv.in / 13.01.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಬರೋಬ್ಬರಿ 2.47 ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 5,488 ಕ್ಕೆ ಏರಿಕೆ.

ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,47,417 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 442 ಜನ ಸಾವನ್ನಪ್ಪಿದಾರೆ.

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 620 ಕೊರೊನಾ ರೂಪಾಂತರ ಒಮಿಕ್ರಾನ್ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿ ಕೊರೊನಾ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 5,488 ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ. ಮಹಾರಾಷ್ಟ್ರದಲ್ಲಿ 1367, ನವದೆಹಲಿ 549 ಗುಜರಾತ್ 136, ತೆಲಂಗಾಣ 67, ಕೇರಳದಲ್ಲಿ 486 ಪ್ರಕರಣಗಳು ವರದಿಯಾಗಿದೆ. ತಮಿಳುನಾಡು 10,978, ಕರ್ನಾಟಕ 479, ಪ್ರಕರಣಗಳು ವರದಿಯಾಗಿದೆ

2,162 ಜನ ಒಮಿಕ್ರಾನ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. 84,825 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 11,17,531 ಇದೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,63,17,927 ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿದರ ಸಂಖ್ಯೆ 4,85,035 ಕ್ಕೆ ಏರಿಕೆಯಾಗಿದೆ.

ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,47,15,361 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 153.58 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ಭಾರತ ಸೇರಿದಂತೆ ದೇಶಾದ್ಯಂತ ಒಮಿಕ್ರೋನ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಎಚ್ಚರವನ್ನು ವಹಿಸಬೇಕು, ಕೋವಿಡ್ ನಿಯಮಗಳನ್ನು ಪಾಲಿಸಬೇಕು.

ಇದನ್ನು ಒದಿ : https://cnewstv.in/?p=7523

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*