Breaking News

11 ದಿನಗಳ ಕಾಂಗ್ರೆಸ್ ಪಾದಯಾತ್ರೆ 5 ದಿನಕ್ಕೆ ಅಂತ್ಯ

Cnewstv.in / 13.01.2022 / ರಾಮನಗರ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

11 ದಿನಗಳ ಕಾಂಗ್ರೆಸ್ ಪಾದಯಾತ್ರೆ 5 ದಿನಕ್ಕೆ ಅಂತ್ಯ.

ರಾಮನಗರ : ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದ್ದು, ಅನೇಕ ಪರ-ವಿರೋಧಗಳ ನಡುವೆಯೂ ಯಶಸ್ವಿಯಾಗಿ ನಾಲ್ಕು ದಿನಗಳನ್ನು ಮುಗಿಸಿದ ಕಾಂಗ್ರೆಸ್ ಪಾದಯಾತ್ರೆ ಇಂದು ಐದನೇ ದಿನಕ್ಕೆ ತಲುಪಿತು.

ರಾಮನಗರ ಜಿಲ್ಲಾಡಳಿತಕ್ಕೆ ಹಾಗೂ ಕೆಪಿಸಿಸಿಗೆ ರಾಜ್ಯ ಹೈಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ರಾಮನಗರದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸದ್ಯಕ್ಕೆ ಮೇಕೆದಾಟು ಪಾದಯಾತ್ರೆಯನ್ನು ಮೊಟಕುಗೊಳಿಸಿ ಕೊರೋನಾ ಸೋಂಕು ತಗ್ಗಿದ ನಂತರ ಮತ್ತೆ ಮುಂದುವರಿಸುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಸಭೆಯಲ್ಲಿ ಪಾದಯಾತ್ರೆಯನ್ನು ಕೊನೆಗೊಳಿಸುವ ಬಗ್ಗೆಯೇ ಹೆಚ್ಚಿನ ನಾಯಕರು ಒಲವು ವ್ಯಕ್ತಪಡಿಸಿದ್ದರಿಂದ ಇಂದಿಗೆ ಪಾದಯಾತ್ರೆ ಕೊನೆಯಾಗಲಿದೆ.

ಹೇಗಿದ್ದರೂ ನ್ಯಾಯಾಲಯ ನಾಳೆ ಪಾದಯಾತ್ರೆ ರದ್ದು ಮಾಡುವ ಬಗ್ಗೆ ಸೂಚನೆ ನೀಡಲಿದೆ. ಆ ಕಾರಣಕ್ಕೆ ಸರ್ಕಾರ ಈಗ ನಿರ್ಬಂಧ ವಿಧಿಸಿದೆ. ನಾವು ಅದನ್ನು ಮೀರಿದರೆ ಕೋರ್ಟ್ ಅಸಮಾಧಾನ ಹೊರ ಹಾಕಿ ಕಟು ಪದಗಳಿಂದ ತರಾಟೆಗೆ ತೆಗೆದುಕೊಳ್ಳಬಹುದು. ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡು ಕಾಂಗ್ರೆಸ್ ಪಾದಯಾತ್ರೆ ನಿಲ್ಲಿಸಿತು ಎನ್ನಿಸಿಕೊಳ್ಳುವುದು ಒಂದು ರೀತಿಯ ಹಿನ್ನಡೆ ಆದಂತೆ.

ಅದೇ ಸರ್ಕಾರ ಪಾದಯಾತ್ರೆ ಮೇಲೆ ನಿರ್ಬಂಧ ಹೇರಿದ ಕಾರಣಕ್ಕೆ ಪಾದಯಾತ್ರೆ ಕೊನೆಯಾದರೆ ಪಕ್ಷಕ್ಕೆ ಇದರಿಂದ ಲಾಭ. ನಮ್ಮ ನೀರಿನ ಹೋರಾಟಕ್ಕೆ ಬಿಜೆಪಿ ತಡೆ ಹಾಕಿತು ಎಂದು ಬಿಂಬಿಸಿದರೆ ಲಾಭ ಹೆಚ್ಚು ಎಂದು ಇಂದು ಸಭೆಯಲ್ಲಿ ಅನೇಕ ಕಾಂಗ್ರೆಸ್ ನಾಯಕರು ಸಲಹೆ, ಅಭಿಪ್ರಾಯ ಹೊರಹಾಕಿದರು ಎಂದು ತಿಳಿದುಬಂದಿದೆ.

ಇದನ್ನು ಒದಿ : https://cnewstv.in/?p=7527

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*