Cnewstv.in / 13.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
“ನಮ್ಮಮ್ಮ ಸೂಪರ್ ಸ್ಟಾರ್” ರಿಯಾಲಿಟಿ ಶೋ ಸ್ಪರ್ಧಿ 6 ವರ್ಷದ ಸಮನ್ವಿ ಅಪಘಾತದಲ್ಲಿ ಸ್ಥಳದಲ್ಲೇ ಸಾವು
ಬೆಂಗಳೂರು : ಇತ್ತೀಚೆಗೆ ಕಲರ್ಸ್ ಕನ್ನಡದಲ್ಲಿ ಆರಂಭವಾಗಿರುವ ನಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ 6 ವರ್ಷದ ಸಮನ್ವಿ ಅಪಘಾತದಲ್ಲಿ ಮೃತಪಟ್ಟಿದ್ದಾಳೆ.
ಇಂದು ಸಂಜೆ ಬೆಂಗಳೂರಿನ ಕೋಣನಕುಂಟೆಯ ವಾಜರಹಳ್ಳಿಯಲ್ಲಿ ಸ್ಕೂಟರ್ ನಲ್ಲಿ ಅಮೃತ ಹಾಗೂ ಸಮನ್ವಿ ಹೋಗುವಾಗ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸಮನ್ವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಅಮೃತಾಳಿಗೆ ತೀವ್ರವಾದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಾರಿ ಚಾಲಕನನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖ್ಯಾತ ಹರಿಕಥೆ ದಾಸ ಗುರುರಾಜ ನಾಯ್ಡು ರವರ ಮೊಮ್ಮಗಳಾದ ಸಮನ್ವಿ ಹಾಗೂ ಅಮೃತ ಕಿರುತೆರೆ ಎಲ್ಲಿ ಅಪಾರ ಜನಪ್ರಿಯತೆಯನ್ನು ಗಳಿಸಿದರು. ಸಮನ್ವಿ ಸಾವಿನ ಸುದ್ದಿ ಪ್ರೇಕ್ಷಕರಿಗೆ ದುಃಖ ತಂದಿದೆ.
ಇದನ್ನು ಒದಿ : https://cnewstv.in/?p=7559
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv