Breaking News

ನಗರದಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ, ಖರೀದಿಯಲ್ಲಿ ನಿರತರಾದ ಜನರು.

Cnewstv.in / 14.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ನಗರದಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ, ಖರೀದಿಯಲ್ಲಿ ನಿರತರಾದ ಜನರು.

ಶಿವಮೊಗ್ಗ : ಕೊರೊನಾ ನಡುವೆಯೂ ನಗರದಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಜನರು ಹಬ್ಬಕ್ಕೆ ಬೇಕಾದ ಸಾಮಗ್ರಿಗಳನ್ನು ಖರೀದಿ ಮಾಡುವುದರಲ್ಲೇ ನಿರತರಾಗಿದ್ದಾರೆ.

ನಗರದ ಗಾಂಧಿಬಜಾರ್, ಶಿವಪ್ಪನಾಯಕ ಪ್ರತಿಮೆ ಮುಂಭಾಗ, ವಿನೋಬನಗರ ಪೋಲಿಸ್ ಚೌಕಿ, ಎಪಿಎಂಸಿ ಮಾರುಕಟ್ಟೆ ಮುಂಭಾಗದಲ್ಲಿ ಕಬ್ಬು ಹೂವು ಹಣ್ಣು ಸೇರಿದಂತೆ ಹಬ್ಬದ ಸಾಮಗ್ರಿಗಳನ್ನು ಮಾರಾಟ ಮಾಡಲಾಗುತ್ತಿದೆ. ಎಂದಿನಂತೆ ಈ ಬಾರಿಯೂ ಸಹ ಪೂಜಾ ಸಾಮಗ್ರಿಗಳು ಸೇರಿದಂತೆ ಹೂವು ಹಣ್ಣು ತರಕಾರಿಗಳ ಬೆಲೆ ಗಗನಕ್ಕೇರಿದೆ.

ಎರಡು ದಿನ ಸಂಕ್ರಾಂತಿ ಹಬ್ಬದ ಆಚರಣೆಯನ್ನು ಮಾಡಲಾಗುತ್ತಿತ್ತು, ಕೆಲವರು ಜನವರಿ 14ರಂದು ಇನ್ನು ಕೆಲವರು ಜನವರಿ 15ರಂದು ಸಂಕ್ರಾಂತಿ ಹಬ್ಬವನ್ನು ಆಚರಣೆ ಮಾಡುತ್ತಾರೆ. ಆದರೆ ಈ ಬಾರಿ ವೀಕೆಂಡ್ ಕರ್ಫ್ಯೂ ಇರುವುದರಿಂದ ನಾಳೆ ಹಬ್ಬ ಆಚರಣೆ ಮಾಡುವವರು ಇಂದೇ ಸಾಮಗ್ರಿಗಳನ್ನು ಖರೀದಿಸುತ್ತಿದ್ದಾರೆ.

ಇದನ್ನು ಒದಿ : https://cnewstv.in/?p=7564

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*