Cnewstv.in / 14.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಮುಂದಿನ ದಿನಗಳಲ್ಲಿ ಲಾಕ್ ಡೌನ್ ಆಗುತ್ತಾ?? ಇಲ್ವಾ?ಆರೋಗ್ಯ ಸಚಿವ ಸುಧಾಕರ್ ಹೇಳಿದ್ದೇನು ??
ಬೆಂಗಳೂರು : ರಾಜ್ಯಾದ್ಯಂತ ಕೊರೊನಾ ನಿಯಂತ್ರಿಸುವುದಕ್ಕಾಗಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಹೀಗಾಗಿಯೋ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು ಮುಂದಿನ ದಿನಗಳಲ್ಲಿ ಲಾಕ್ ಡೌನ್ ಅಗುತ್ತೆ ಎಂಬ ಸುದ್ದಿ ಹರಿದಾಡುತ್ತಿತ್ತು. ಈ ಬಗ್ಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ಕೊರೊನಾ ರೂಪಾಂತರ ಒಮಿಕ್ರಾನ್ ಬಗ್ಗೆ ಜನರು ನಿರ್ಲಕ್ಷ್ಯ ಮಾಡುವುದು ಬೇಡ. ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಕಡ್ಡಾಯವಾಗಿ ಎಲ್ಲರೂ ಲಸಿಕೆಯನ್ನು ಪಡೆಯುವಂತೆ ವಿನಂತಿಸಿದ್ದಾರೆ.
ಇನ್ನು ಫೆಬ್ರವರಿ ಮೊದಲನೇ ವಾರದಲ್ಲಿ ಕೊರೊನಾ ಮೂರನೇ ಅಲೆಯು ಗರಿಷ್ಠ ಮಟ್ಟಕ್ಕೆ ಏರಿಕೆಯಾಗಲಿದ್ದು, 3 ರಿಂದ 4 ನೇ ವಾರದಲ್ಲಿ ಕಡಿಮೆಯಾಗಬಹುದು. ಲಾಕ್ ಡೌನ್ ಹೇರಿಕೆಯೊಂದೇ ಅಸ್ತ್ರ ವಲ್ಲ. 2 ತಿಂಗಳು ಜನರು ಕೋವಿಡ್ ಮಾರ್ಗಸೂಚಿ ಪಾಲಿಸಿದರೆ ಖಂಡಿತವಾಗಿ ಇದನ್ನು ನಿಯಂತ್ರಿಸಬಹುದು.
ಲಾಕ್ ಡೌನ್ ಮಾಡುವುದರಿಂದ ಜನರಿಗೆ ಆಗುವ ತೊಂದರೆಯ ಬಗ್ಗೆ ನಮಗೆ ಅರಿವಿದೆ. ಈಗಾಗಲೇ ಎರಡು ಬಾರಿ ಲಾಕ್ ಡೌನ್ ಮಾಡಲಾಗಿದೆ. ಪ್ರಧಾನಮಂತ್ರಿಗಳು ಮುಖ್ಯಮಂತ್ರಿಗಳ ಜೊತೆಯಲ್ಲಿ ಮಾತನಾಡುವಾಗ ಜನರಿಗೆ ಆರ್ಥಿಕ ನಷ್ಟವಾಗದ ರೀತಿಯಲ್ಲಿ ಜಾಗರೂಕತೆ ವಹಿಸಬೇಕು ಎಂದು ಹೇಳಿದ್ದಾರೆ ಎಂದರು.
ಇದನ್ನು ಒದಿ : https://cnewstv.in/?p=7570
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments