Breaking News

ಅಂಗವನಾಡಿ ಕಾರ್ಯಕರ್ತೆ/ಸಹಾಯಕಿಯರ ನೇಮಕಕ್ಕೆ ಅರ್ಜಿ ಆಹ್ವಾನ.

Cnewstv.in / 14.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಅಂಗವನಾಡಿ ಕಾರ್ಯಕರ್ತೆ/ಸಹಾಯಕಿಯರ ನೇಮಕಕ್ಕೆ ಅರ್ಜಿ ಆಹ್ವಾನ.

ಶಿವಮೊಗ್ಗ : ಶಿಶು ಅಭಿವೃದ್ದಿ ಯೋಜನೆ ಸಾಗರ ವ್ಯಾಪ್ತಿಯ ಕೆಳಕಂಡ ಗ್ರಾಮಗಳಿಂದ ಅಂಗನವಾಡಿ ಕಾರ್ಯಕರ್ತೆ/ಮಿನಿ ಕಾರ್ಯಕರ್ತೆ/ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿವರ : ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ತಾವರೇಹಳ್ಳಿ, ಬರೂರು, ಕೊಳೆಗೋಡು(ಮಿನಿ), ಕಾನಗೋಡು+ಬೆನವಗೋಡು(ಮಿನಿ), ಮಡಸೂರು, ವಡಂಬೈಲು, ಕಾರೇಹೊಂಡ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅಂದಾಸುರ, ಕೆರೆಹಿತ್ಲು, ಲಕ್ಕವಳ್ಳಿ, ಬರೂರು, ದೊಡ್ಡಬ್ಯಾಣ, ಸಂಗಣ್ಣನಕೆರೆ, ನಂದೀತಳೆ, ಅಡೂರು ಇಲ್ಲಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಎಸ್‍ಎಸ್‍ಎಲ್‍ಸಿ ಪಾಸಾದ 18 ರಿಂದ 35 ವಯೋಮಿತಿಯ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಹಾಯಕಿಯರ ಹುದ್ದೆಗೆ 4ನೇ ತರಗತಿ ಉತ್ತೀರ್ಣ ಹೊಂದಿದ ಎಸ್‍ಎಸ್‍ಎಲ್‍ಸಿ ಒಳಗಿನ ವಿದ್ಯಾರ್ಹತೆಯುಳ್ಳ 18 ರಿಂದ 35 ವಯೋಮಿತಿಯ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿಗಳನ್ನು ಆನ್‍ಲೈನ್ ವೆಬ್‍ಸೈಟ್ ಮೂಲಕ ಫೆ.13 ರೊಳಗೆ ಸಲ್ಲಿಸಬೇಕಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ, ಫಲಕ ಹಾಗೂ ಕಚೇರಿಯ ವೇಳೆಯಲ್ಲಿ ಕಚೇರಿಯಲ್ಲಿ ಮಾಹಿತಿ ಪಡೆಯಬಹುದು ಎಂದು ಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ತಿಳಿಸಿದ್ದಾರೆ.

ಇದನ್ನು ಒದಿ : https://cnewstv.in/?p=7576

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*