Cnewstv.in / 14.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ವಾಣಿಜ್ಯ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿ
ಶಿವಮೊಗ್ಗ : ದಿ: 17/01/2022 ರಿಂದ ದಿ:24/01/2022 ರವರೆಗೆ ನಡೆಯುವ ವಾಣಿಜ್ಯ ಪರೀಕ್ಷೆಗಳನ್ನು ಪಾರದರ್ಶಕವಾಗಿ ಯಾವುದೇ ಅವ್ಯವಹಾರಗಳಿಗೆ ಆಸ್ಪದ ನೀಡದಂತೆ, ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಹಾಗೂ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಭದ್ರತೆ ಕೈಗೊಳ್ಳಲು ಭಾರತೀಯ ದಂಡಸಂಹಿತೆ 144ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200ಮೀ. ಪ್ರದೇಶದ ವ್ಯಾಪ್ತಿಯಲ್ಲಿ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಅವರು ಆದೇಶ ನೀಡಿದ್ದಾರೆ.
ಶಿವಮೊಗ್ಗದ ಸರ್ಕಾರಿ ಪ್ರೌಢಶಾಲೆ (ಬಾಲಿಕ) ಬಿ.ಹೆಚ್.ರಸ್ತೆ, ಭದ್ರಾವತಿಯ ಟಿ.ಕೆ.ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜ್ ಹಾಗೂ ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜ. 17 ರಿಂದ 19 ರವರೆಗೆ, ಮತ್ತು ಶಿವಮೊಗ್ಗದ ಬಿ.ಹೆಚ್.ರಸ್ತೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಜ. 20 ರಿಂದ 24 ರವರೆಗೆ ಆಯಾ ದಿನಾಂಕಗಳಂದು ಬೆಳಿಗ್ಗೆ 9.00ರಿಂದ ಸಂಜೆ 4.00ರವರೆಗೆ ನಿಜೇಧಾಜ್ಞೆ ಜಾರಿಯಾಗಿದ್ದು, ನಿಷೇಧಿತ ಪರೀಕ್ಷಾ ಕೇಂದ್ರದ ಸುತ್ತಮುತ್ತಲ ಪ್ರದೇಶದಲ್ಲಿ ಐದು ಮತ್ತು ಐದಕ್ಕಿಂತ ಹೆಚ್ಚಿನ ಜನ ಸೇರುವುದನ್ನು ನಿಷೇಧಿಸಲಾಗಿದೆ.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲ ಟೈಪಿಂಗ್, ಝೆರಾಕ್ಸ್ ಹಾಗೂ ಫ್ಯಾಕ್ಸ್ ಅಂಗಡಿಗಳು ತೆರೆದಿರುವುದನ್ನು ಪ್ರತಿಬಂಧಿಸಲಾಗಿದೆ. ಅಲ್ಲದೆ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ. ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ಸಂಬಂಧಪಟ್ಟ ಸಿಬ್ಬಂದಿ/ಅಧಿಕಾರಿಗಳನ್ನು ಹೊರತುಪಡಿಸಿ ಇತರೆ ವ್ಯಕ್ತಿಗಳು ಪರೀಕ್ಷಾಕೇಂದ್ರದ ಸುತ್ತ ಪ್ರವೇಶಿಸುವಂತಿಲ್ಲ, ಪರೀಕ್ಷಾ ಕೇಂದ್ರದ ಮುಖ್ಯದ್ವಾರದಲ್ಲಿ ಕಡ್ಡಾಯವಾಗಿ ಆರಕ್ಷಕ ಸಿಬ್ಬಂದಿಗಳನ್ನು ನಿಯೋಜಿಸಿ, ಅನಗತ್ಯ ವ್ಯಕ್ತಿಗಳ ಚಲನವಲನಗಳನ್ನು ನಿಯಂತ್ರಿಸಲು ಸಂಬಂಧಪಟ್ಟ ಠಾಣಾ ಮುಖ್ಯಸ್ಥರಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ನಿಷೇದಾಜ್ಞೆಯಲ್ಲಿ ಆದೇಶಿಸಿರುತ್ತಾರೆ.
ಇದನ್ನು ಒದಿ : https://cnewstv.in/?p=7578
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv