Breaking News

ಜಿಲ್ಲೆಯಲ್ಲಿ ಸುಸಜ್ಜಿತ ಟ್ರಕ್ ಟರ್ಮಿನಲ್ ನಿರ್ಮಿಸಲು ಸೂಕ್ತ ಜಾಗ ಗುರುತಿಸಲು ಸೂಚನೆ.

Cnewstv.in / 14.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಜಿಲ್ಲೆಯಲ್ಲಿ ಸುಸಜ್ಜಿತ ಟ್ರಕ್ ಟರ್ಮಿನಲ್ ನಿರ್ಮಿಸಲು ಸೂಕ್ತ ಜಾಗ ಗುರುತಿಸಲು ಸೂಚನೆ.

ಶಿವಮೊಗ್ಗ : ಜಿಲ್ಲೆಯಲ್ಲಿ ಸುಸಜ್ಜಿತವಾದ ಟ್ರಕ್ ಟರ್ಮಿನಲ್ ನಿರ್ಮಿಸುವುದು ಅವಶ್ಯವಾಗಿದ್ದು ಶಿವಮೊಗ್ಗ ಸುತ್ತಮುತ್ತ ಸೂಕ್ತ ಜಾಗವನ್ನು ಗುರುತಿಸಿದಲ್ಲಿ ಟರ್ಮಿನಲ್ ನಿರ್ಮಾಣಕ್ಕೆ ಮತ್ತು ಅಭಿವೃದ್ದಿಗೆ ಅನುದಾನ ಒದಗಿಸಲಾಗುವುದು. ನಿಮ್ಮ ಸಹಕಾರ ಇದ್ದರೆ ಮಾತ್ರ ಇದು ಸಾಧ್ಯ ಎಂದು ಡಿ.ದೇವರಾಜ ಅರಸ್ ಟ್ರಕ್ ಟರ್ಮಿನಲ್ ಅಧ್ಯಕ್ಷರಾದ ಡಿ.ಎಸ್.ವೀರಯ್ಯ ಅಧಿಕಾರಿಗಳಿಗೆ ತಿಳಿಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಟ್ರಕ್ ಟರ್ಮಿನಲ್ ನಿರ್ಮಿಸಲು ಅನುವಾಗುವಂತೆ ಯೋಗ್ಯ ಜಮೀನನ್ನು ಪಶಪಡಿಸಿಕೊಳ್ಳುವ ಕುರಿತು ಜಿಲ್ಲಾಧಿಕಾರಿಗಳು, ಶಿವಮೊಗ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧಿಕಾರಿಗಳು, ಕೆಐಎಡಿಬಿ ಹಾಗೂ ಕಂದಾಯ ಅಧಿಕಾರಿಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲ್ಲಿ ಇಂದು ಏರ್ಪಡಿಸಲಾಗಿದ್ದ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಕೆಲವೆಡೆ ಸುಸಜ್ಜಿತವಾದ ಟ್ರಕ್ ಟರ್ಮಿನಲ್‍ಗಳ ಸ್ಥಾಪನೆಯಾಗಿದೆ. ಹಲವೆಡೆ ಇನ್ನೂ ಆಗಬೇಕಿದೆ. ಟ್ರಕ್ ಟರ್ಮಿನಲ್‍ಗಳ ಸ್ಥಾಪನೆಯಿಂದ ಅಪಘಾತಗಳು ಕಡಿಮೆಯಾಗುತ್ತದೆ. ಹಾಗೂ ವಾಯು ಮಾಲಿನ್ಯ ಮತ್ತು ದಟ್ಟಣೆ ಕೂಡ ಕಡಿಮೆ ಆಗುತ್ತದೆ. ಜೊತೆಗೆ ಉದ್ಯೋಗಾವಕಾಶದೊಂದಿಗೆ ಮಿನಿ ಟೌನ್‍ಶಿಪ್ ನಿರ್ಮಾಣವಾದಂತೆ ಆಗುತ್ತದೆ. ಇಲ್ಲಿ ಲಾರಿ ಏಜೆಂಟರಿಗೆ ಕಚೇರಿ ನೀಡಬಹುದು. ಹೀಗೆ ಟ್ರಕ್ ಟರ್ಮಿನಲ್‍ನಿಂದ ಅನೇಕ ಅನುಕೂಲತೆಗಳು ಇವೆ.

ಟರ್ಮಿನಲ್ ಇಲ್ಲದಿದ್ದರೆ ರಸ್ತೆ ಬದಿ ಲಾರಿಗಳನ್ನು ನಿಲ್ಲಿಸಲಾಗುತ್ತದೆ. ಮುಂಜಾವಿನಲ್ಲಿ ಟ್ರಕ್ ತೆರವುಗೊಳಿಸುವ ಅನಿವಾರ್ಯತೆಯಿಂದ ಬೇಗ ಹೊರಡುವುದರಿಂದ ಅಪಘಾತಗಳ ಸಂಖ್ಯೆ ಸಹ ಹೆಚ್ಚುತ್ತದೆ. ಆದ್ದರಿಂದ ಜಿಲ್ಲೆಯಲ್ಲಿ ಟ್ರಕ್ ಟರ್ಮಿನಲ್ ನಮ್ಮ ಅವಧಿಯಲ್ಲೇ ಆಗಬೇಕೆಂದು ಆಶಯ ವ್ಯಕ್ತಪಡಿಸಿದ ಅವರು ಜಿಲ್ಲಾಧಿಕಾರಿಗಳು ಆರ್‍ಐ, ಗ್ರಾಮ ಲೆಕ್ಕಿಗರು ಸೇರಿದಂತೆ ತಳಮಟ್ಟದ ಅಧಿಕಾರಿಗಳ ಸಭೆ ಕರೆದು ಶಿವಮೊಗ್ಗ ಸುತ್ತಮುತ್ತ ಜಾಗ ಇದೆಯಾ ಎಂದು ಪರಿಶೀಲಿಸಬೇಕೆಂದು ಸೂಚಿಸಿದರು.

ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ಕನಿಷ್ಟ 15 ರಿಂದ 20 ಎಕರೆಯಿಂದ ಗರಿಷ್ಟ 50 ಎಕರೆವರೆಗೆ ಜಾಗ ಗುರಿತಿಸಿದರೆ ಒಳ್ಳೆಯದು. ಇಲ್ಲಿ ವೇರ್‍ಹೌಸ್ ಕೂಡ ನಿರ್ಮಿಸಬಹುದು. ಹೊಸಪೇಟೆ, ಹುಬ್ಬಳ್ಳಿ, ಧಾರವಾಡ, ಯಶವಂತಪುರ ಇಲ್ಲಿ ಸುಸಜ್ಜಿತ ಟರ್ಮಿನಲ್‍ಗಳು ಇವೆ. ಮೊದಲನೇ ಆದ್ಯತೆಯಲ್ಲಿ ಸರ್ಕಾರಿ ಜಮೀನು ಗುರುತಿಸುವುದು ಒಳ್ಳೆಯದು. ಅದು ಲಭ್ಯವಿಲ್ಲದಿದ್ದರೆ ನಗರೋತ್ಥಾನ ಅಥವಾ ಕೆಐಎಡಿಬಿ ಜಾಗವನ್ನು ಗುರುತಿಸಬೇಕು.

ರಾಷ್ಟ್ರೀಯ ಹೆದ್ದಾರಿ ಸುತ್ತಮುತ್ತ 2 ರಿಂದ 5 ಕಿ.ಮೀ ಒಳಗೆ ಜಾಗ ಗುರುತಿಸಬೇಕು. ತಹಶೀಲ್ದಾರರು, ನಗರಾಭಿವೃದ್ದಿ ಮತ್ತು ಕೆಎಐಡಿಬಿ ಅಧಿಕಾರಿಗಳು ಜಾಗ ಗುರುತಿಸಲು ಜಿಲ್ಲಾಧಿಕಾರಿಗಳೀಗೆ ಸಹಕರಿಸಬೇಕೆಂದು ಹೇಳಿದರು.

ಇದನ್ನು ಒದಿ : https://cnewstv.in/?p=7582

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*