Cnewstv.in / 14.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ.
ಬೆಂಗಳೂರು : ಸಂಕ್ರಾಂತಿ ಹಬ್ಬದಂದು ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ.
ಹೌದು ವೇತನ ಹೆಚ್ಚಳ ಸೇರಿದಂತೆ ಅನೇಕ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸರ್ಕಾರ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಸರ್ಕಾರದ ವಿರುದ್ಧ ಹೋರಾಟಕ್ಕೆ ಇಳಿದಿದ್ದರು. ಆದರೆ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿಯನ್ನು ನೀಡಿದ್ದು, ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ ಅಶ್ವಥ್ ನಾರಾಯಣ್ ರವರು ಇಂದು ಸರ್ಕಾರದ ಪರವಾಗಿ ವಿಧಾನಸೌಧದಲ್ಲಿ ಮಹತ್ವದ ನಿರ್ಧಾರವನ್ನು ಪ್ರಕಟಿಸಿತ್ತು ಈ ಕೆಳಗಿನಂತಿದೆ.
*ದುಪ್ಪಟ್ಟು ವೇತನ ಹೆಚ್ಚಳ ಮಾಡಲಾಗಿದ್ದು, ಸಮಿಸ್ಟರ್ ವಾರು ನೇಮಕಾತಿಯನ್ನು ನಿಲ್ಲಿಸಿ ಇನ್ನು ಮುಂದೆ ಶೈಕ್ಷಣಿಕ ವರ್ಷಕ್ಕೆ ನೇಮಿಸಿಕೊಳ್ಳುವುದಾಗಿ ಘೋಷಿಸಿದೆ.
*ಯುಜಿಸಿ ನಿಗದಿತ ಶೈಕ್ಷಣಿಕ ಅರ್ಹತೆ ಇದ್ದು, 5 ವರ್ಷ ಅಥವಾ ಅದಕ್ಕಿಂತಲೂ ಹೆಚ್ಚು ಕಾಲ ಸೇವೆಯನ್ನು ಸಲ್ಲಿಸಿದಂತಹ ಅತಿಥಿ ಉಪನ್ಯಾಸಕರಿಗೆ 32 ಸಾವಿರ ರೂಪಾಯಿ ಗೌರವಧನ ನೀಡಲಾಗುವುದು.
* 5 ವರ್ಷಕ್ಕಿಂತ ಕಡಿಮೆ ಅವಧಿಯಲ್ಲಿ ಸೇವೆ ಸಲ್ಲಿಸಿರುವವರಿಗೆ ಅತಿಥಿ ಉಪನ್ಯಾಸಕರಿಗೆ
30 ಸಾವಿರ ಗೌರವಧನ ನೀಡಲಾಗುವುದು.
* ಯುಜಿಸಿ ನಿಗದಿಪಡಿಸಿದ ಅರ್ಹತೆಯನ್ನು ಹೊಂದಿಲ್ಲದಿದ್ದರೂ 5 ವರ್ಷಕ್ಕಿಂತ ಹೆಚ್ಚಿನ ಅವಧಿ ಸೇವೆ ಸಲ್ಲಿಸಿದವರ ವೇತನವನ್ನು 28 ಸಾವಿರಕ್ಕೆ ಹೆಚ್ಚಿಸಲಾಗಿದೆ.
* ಅತಿಥಿ ಉಪನ್ಯಾಸಕರ ಕಾರ್ಯಭಾರ ಅವಧಿ 8 ರಿಂದ 10 ಗಂಟೆ ಇದ್ದು, ಇನ್ನೂ ಮುಂದೆ 15 ಗಂಟೆಗೆ ಹೆಚ್ಚಿಸಲಾಗಿದೆ.
ಇದನ್ನು ಒದಿ : https://cnewstv.in/?p=7592
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments