Breaking News

ಬೆಳ್ಳಂಬೆಳಗ್ಗೆ ಹೊತ್ತಿ ಉರಿದ ಶಾಪಿಂಗ್ ಮಾಲ್

Cnewstv.in / 15.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಬೆಳ್ಳಂಬೆಳಗ್ಗೆ ಹೊತ್ತಿ ಉರಿದ ಶಾಪಿಂಗ್ ಮಾಲ್

ಬೆಂಗಳೂರು : ಇಂದು ಬೆಳಗಿನ ಜಾವ ಶಾಪಿಂಗ್ ಮಾಲ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಅರಕೆರೆ ಗೇಟ್ ಬಳಿಯ ‘ಸೌಥ್ ಇಂಡಿಯಾ ಮಾಲ್’ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ದಿಢೀರ್ ಎಂದು ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆಯೇ ಶಾಪಿಂಗ್ ಕಾಂಪ್ಲೆಕ್ಸ್ ತುಂಬಾ ಬೆಂಕಿ ಆವರಿಸಿಕೊಂಡಿದೆ.

ಮಾಲ್ ನ ಸೂಪರ್ ಮಾರ್ಕೆಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಮಾಲ್ ನಲ್ಲಿ ಯಾರೂ ಇರಲಿಲ್ಲ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.

ಬೆಂಕಿ ಅವಘಡದಿಂದಾಗಿ ಶಾಪಿಂಗ್ ಮಾಲ್ ನಲ್ಲಿ ಇದ್ದ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.

ಸತತವಾಗಿ ಎರಡು ಗಂಟೆಗೂ ಹೆಚ್ಚು ಸಮಯ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ಹತೋಟಿಗೆ ತರಲಾಯಿತು.‌ ಅಗ್ನಿಶಾಮಕ ಸಿಬ್ಬಂದಿಗಳು 6 ಅಗ್ನಿಶಾಮಕ ವಾಹನಗಳಿಂದ ಬೆಂಕಿಯನ್ನು ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದ ಬಹುದು ಎಂದು ಶಂಕಿಸಲಾಗಿದೆ.‌

ಇದನ್ನು ಒದಿ : https://cnewstv.in/?p=7597

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*