Breaking News

ಮೇಕೆದಾಟು ಪಾದಯಾತ್ರೆ : ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ 55 ಪೊಲೀಸರಿಗೆ ಕೊರೊನಾ ಪಾಸಿಟಿವ್

Cnewstv.in / 15.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಮೇಕೆದಾಟು ಪಾದಯಾತ್ರೆ : ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ 55 ಪೊಲೀಸರಿಗೆ ಕೊರೊನಾ ಪಾಸಿಟಿವ್

ಬೆಂಗಳೂರು : ಕಾಂಗ್ರೆಸ್ ಹಮ್ಮಿಕೊಂಡಿದ್ದ ಮೇಕೆದಾಟು ಪಾದಯಾತ್ರೆ ವೇಳೆ ಭದ್ರತೆಗೆ ನಿಯೋಜನೆಗೊಂಡಿದ್ದ 55 ಪೊಲೀಸರಿಗೆ ಕೊರೋನಾ ಸೋಂಕು ದೃಡಪಟ್ಟಿದೆ.

ಪಾದಯಾತ್ರೆ ವೇಳೆ ಭದ್ರತೆಗೆ ನಿಯೋಜನೆಗೊಂಡಿದ್ದ ಚಿಕ್ಕಬಳ್ಳಾಪುರ-ಕೋಲಾರ ಕೆಜಿಎಫ್ ನ ಪೊಲೀಸ್ ಸಿಬ್ಬಂದಿಗಳು, ಅಧಿಕಾರಿಗಳು ಹಾಗೂ ಅವರ ಕುಟುಂಬದ ಸದಸ್ಯರಿಗೆ ಕೊರೊನಾ ಸೋಂಕು ದೃಡಪಟ್ಟಿದೆ.

ಚಿಕ್ಕಬಳ್ಳಾಪುರದಿಂದ ಬಂದಿದ್ದ 125 ಪೊಲೀಸರ ಪೈಕಿ 10 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕೋಲಾರದಿಂದ ಬಂದಿದ್ದ 110 ಪೊಲೀಸರ ಪೈಕಿ 43 ಮಂದಿಗೆ ಪರೀಕ್ಷೆಗೊಳಪಡಿಸಲಾಗಿತ್ತು 25 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೆಜಿಎಫ್ ನಿಂದ ಬಂದಿದ್ದ 110 ಪೋಲಿಸರ ಪೈಕಿ 60 ಮಂದಿಗೆ ಪರೀಕ್ಷೆಗೊಳಪಡಿಸಲಾಗಿತ್ತು 20 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಇನ್ನು ಪಾದಯಾತ್ರೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಎಲ್ಲಾ ಪೊಲೀಸರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗುವುದು, ನೆಗೆಟಿವ್ ಬಂದವರಿಗೆ ಮಾತ್ರ ಕಳುಹಿಸಲಾಗುವುದು. ಉಳಿದವರಿಗೆ ಪ್ರತ್ಯೇಕವಾಗಿ ಐಸೋಲೇಷನ್ ನಲ್ಲಿ ಇರಿಸಲಾಗುವುದು ಎಂದು ಐಜಿಪಿ ಚಂದ್ರಶೇಖರ್ ತಿಳಿಸಿದ್ದಾರೆ.

ಇದನ್ನು ಒದಿ : https://cnewstv.in/?p=7605

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*