Cnewstv.in / 15.01.2022 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಸೇರಿ ಐವರ ಪ್ರಕರಣ ತನಿಖೆ ನಡೆಸುವಂತೆ ಒಳಾಡಳಿತ ಇಲಾಖೆಗೆ ಆದೇಶ.
ಬೆಂಗಳೂರು : ಜಲ್ಲಿ ಕ್ರಷರ್ ವ್ಯವಹಾರದಲ್ಲಿ ವಂಚನೆ ಮಾಡಿದ್ದ ವ್ಯಕ್ತಿಯ ವಿರುದ್ಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಹಣ ಪಡೆದು ವಂಚನೆ ಮಾಡಿರುವ ಕುರಿತಾಗಿ ನೀಡಿದ ದೂರಿಗೆ ನ್ಯಾಯ ದೊರಕಿಸಿ ಕೊಡದೆ ಆರೋಪಿಗಳಿಂದ 50 ಲಕ್ಷ ರೂ. ಹಣ ಪಡೆದಿದ್ದಾರೆ.
ದೂರು ನೀಡಿದ ವ್ಯಕ್ತಿಗೆ ಅನ್ಯಾಯ ಮಾಡಲಾಗಿದೆ ಎಂದು ಸಿಐಡಿ ಎಸ್ ಪಿ ರವಿ ಡಿ. ಚನ್ನಣ್ಣನವರ್ ಸೇರಿದಂತೆ ನಾಲ್ವರು ಪೊಲೀಸ್ ಅಧಿಕಾರಿಗಳ ಮೇಲೆ ಆರೋಪಿಗಳಾಗಿದ್ದು, ಸಂತ್ರಸ್ತ ವ್ಯಕ್ತಿ ಸರ್ಕಾರದ ಮುಖ್ಯ ಕಾರ್ಯದರ್ಶಿ ದೂರು ಸಲ್ಲಿಸಿದ್ದರು. ಈ ಬಗ್ಗೆ ತನಿಖೆ ನಡೆಸುವಂತೆ ಒಳಾಡಳಿತ ಇಲಾಖೆಗೆ ಈಗಾಗಲೇ ಆದೇಶ ಮಾಡಲಾಗಿದೆ.
ಸದ್ಯ ಸಿಐಡಿಯಲ್ಲಿ ಎಸ್ಪಿಯಾಗಿರುವ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್, ಅಂದಿನ ಡಿವೈಎಸ್ಪಿ ಮಹದೇವಪ್ಪ, ಪೊಲೀಸ್ ಇನ್‌ಸ್ಪೆಕ್ಟರ್ ಶ್ರೀನಿವಾಸ್ ಹಾಗೂ ಇಸ್ಮಾಯಿಲ್ ಹೊಸೂರು ಎಂಬುವರ ವಿರುದ್ಧ ಮಂಜುನಾಥ್ ಎಂಬುವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್‌ಗೆ ದೂರು ನೀಡಿದ್ದರು. ದೂರನ್ನಾಧರಿಸಿ ತನಿಖೆ ನಡೆಸುವಂತೆ ಒಳಾಡಳಿತ ಇಲಾಖೆಗೆ ಆದೇಶಿಸಲಾಗಿದೆ
ಇದನ್ನು ಒದಿ : https://cnewstv.in/?p=7613
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments