Cnewstv.in / 16.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಬರೋಬ್ಬರಿ 2.71 ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 7,743 ಕ್ಕೆ ಏರಿಕೆ.
ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,71,202 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 314 ಜನ ಸಾವನ್ನಪ್ಪಿದಾರೆ.
ದೇಶದಲ್ಲಿ ಕೊರೊನಾ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 6,041ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 15 ಕ್ಕೆ ಏರಿಕೆಯಾಗಿದೆ.
2,162 ಜನ ಒಮಿಕ್ರಾನ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. 1,38,331 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 15,50,377 ಇದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,71,22,164 ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿದರ ಸಂಖ್ಯೆ 4,86,066 ಕ್ಕೆ ಏರಿಕೆಯಾಗಿದೆ.
ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,50,85,721 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 16 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ.
ಭಾರತ ಸೇರಿದಂತೆ ದೇಶಾದ್ಯಂತ ಒಮಿಕ್ರೋನ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಎಚ್ಚರವನ್ನು ವಹಿಸಬೇಕು, ಕೋವಿಡ್ ನಿಯಮಗಳನ್ನು ಪಾಲಿಸಬೇಕು.
ಇದನ್ನು ಒದಿ : https://cnewstv.in/?p=7623
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv