Breaking News

ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಅನೈತಿಕ ಸಂಬಂಧದ ಅಪಪ್ರಚಾರ, ಮನನೊಂದ ಮಹಿಳೆ ಮಕ್ಕಳೊಂದಿಗೆ ಆತ್ಮಹತ್ಯೆ.

Cnewstv.in / 16.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಅನೈತಿಕ ಸಂಬಂಧದ ಅಪಪ್ರಚಾರ, ಮನನೊಂದ ಮಹಿಳೆ ಮಕ್ಕಳೊಂದಿಗೆ ಆತ್ಮಹತ್ಯೆ.

ಶಿವಮೊಗ್ಗ : ಕೊಟ್ಟ ಸಾಲವನ್ನು ಹಿಂತಿರುಗಿಸುವಂತೆ ಕೇಳಿದ್ದಕ್ಕೆ ಅನೈತಿಕ ಸಂಬಂಧದ ಅಪಪ್ರಚಾರ ಮಾಡಿದ್ದು, ಮನನೊಂದ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಭದ್ರಾ ನಾಲೆಗೆ ಹಾರಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.

ವೀಣಾ ಎಂಬ ಮಹಿಳೆ ಸಂತೋಷ ಹಾಗೂ ಆಶಾ ಎಂಬುವರಿಗೆ 8 ಲಕ್ಷ ರೂಪಾಯಿಗಳನ್ನು ಸಾಲವಾಗಿ ನೀಡಿದ್ದಾಳೆ. ಸಾಲದ ಹಣವನ್ನು ವಾಪಸ್ ಕೊಡುವಂತೆ ಕೇಳಿದಾಗ ಸಂತೋಷ ಮತ್ತು ಆಶಾ ವೀಣಾಳಿಗೆ ಹಣವನ್ನು ಹಿಂತಿರುಗಿಸದೆ ಬೇರೆಯವರ ಜೊತೆ ಸಂಬಂಧ ಇಟ್ಟುಕೊಂಡಿದ್ದಾಳೆ ಎಂದು ಅಪಪ್ರಚಾರ ಮಾಡಿ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದ. ‌

ಈ ವಿಚಾರವಾಗಿ ಮನನೊಂದ ವೀಣಾ ಸಂಕ್ರಾಂತಿ ಹಬ್ಬದಂದು ತನ್ನ ತವರು ಮನೆ ಹೊಳಲ್ಕೆರೆಗೆ ಹೋಗುತ್ತೇನೆ ಎಂದು ಹೇಳಿ ತನ್ನ 7 ವರ್ಷದ ಮಗು ಹಾಗೂ 1 ವರ್ಷದ ಇಬ್ಬರು ಹೆಣ್ಣು ಮಕ್ಕಳು ಜೊತೆ ಮನೆಯಿಂದ ಹೊರಟು ಸಿದ್ದಾಪುರ ಗ್ರಾಮದ ಬಳಿ ಇರುವ ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವೀಣಾ ಹಾಗೂ 7 ವರ್ಷದ ಮಗುವಿನ ಮೃತದೇಹ ದೊರೆತಿದ್ದು, ಇನ್ನೊಬ್ಬ ಮಗಳ ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ವೀಣಾ ಪತಿಯ ದೂರಿನ ಅನ್ವಯ ಆರೋಪಿ ಸಂತೋಷ್ ನನ್ನ ಪೊಲೀಸರು ಬಂಧಿಸಿದ್ದಾರೆ.

ಇದನ್ನು ಒದಿ : https://cnewstv.in/?p=7626

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*